ಬೀದರ್‌-ಬೆಂಗಳೂರು ವಿಮಾನಯಾನ ಪುನಾರಂಭಕ್ಕೆ ₹14 ಕೋಟಿ ಮೀಸಲು : ಸಚಿವ ಈಶ್ವರ ಖಂಡ್ರೆ

Date:

Advertisements

ಕೇಂದ್ರ ಸರ್ಕಾರ ಉಡಾನ್ ಸಬ್ಸಿಡಿ ನಿಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೀದರ್‌-ಬೆಂಗಳೂರು ವಿಮಾನಯಾನ ಪುನಾರಂಭಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯಿಂದ ಪ್ರಸಕ್ತ ವರ್ಷ ₹14 ಕೋಟಿ ಮೀಸಲಿಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೀದರ್ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ರವಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ʼಏ.16ರಂದು ಸಂಜೆ 4 ಗಂಟೆಗೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ವಿಮಾನ ನಿಲ್ದಾಣದ ಹೊರಗೆ ನಡೆಯುವ ಕಾರ್ಯಕ್ರಮದಲ್ಲಿ 17ರಂದು ಬೆಳಿಗ್ಗೆ ಬೀದರ್‌ನಿಂದ ಬೆಂಗಳೂರಿಗೆ ತೆರಳಲಿರುವ ಆಯ್ದ 5 ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ವಿತರಿಸುವ ಮೂಲಕ ನಾಗರಿಕ ವಿಮಾನಯಾನ ಸೇವೆಯ ಪುನಾರಂಭಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆʼ ಎಂದರು.

ಕರುನಾಡಿಗೆ ಕಿರೀಟಪ್ರಾಯವಾಗಿರುವ ಬೀದರ್ ಸರ್ವಧರ್ಮ ಸಮನ್ವಯದ ನಾಡು. ಜಿಲ್ಲೆಯಲ್ಲಿ ಇತಿಹಾಸ ಪ್ರಸಿದ್ಧ ಬಸವಕಲ್ಯಾಣದ ಅನುಭವ ಮಂಟಪ, ಝರಣಿ ನರಸಿಂಹ ಸ್ವಾಮಿ ದೇವಸ್ಥಾನ, ಪಾಪನಾಶ, ನಾನಕ್ ಝೀರಾ ಗುರುದ್ವಾರ್, ಮುಹಮ್ಮದ್ ಗವಾನ್ ಮದರಸಾ ಹಾಗೂ ಮೆಥೋಡಿಸ್ಟ್ ಚರ್ಚ್ ಇದೆ. ಈಗ ಹೊನ್ನಿಕೇರಿ ಅರಣ್ಯ ಪ್ರದೇಶವನ್ನು ಪರಿಸರ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಪಡಿಸುತ್ತಿದ್ದು, ಬೀದರ್‌ನಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದೆ. ಹೀಗಾಗಿ ಈ ವಿಮಾನಯಾನ ಸೇವೆ ಮುಂದಿನ ದಿನಗಳಲ್ಲಿ ದೇಶ ವಿದೇಶಗಳ ಪ್ರವಾಸಿಗರಿಗೆ ನೆರವಾಗಲಿದೆʼ ಎಂದರು.

Advertisements

₹2,025 ಕೋಟಿ ಮೌಲ್ಯದ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ, ಯೋಜನೆಗಳ ಶಂಕುಸ್ಥಾಪನೆ ಮತ್ತು ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಏ.16 ರಂದು ಸಿಎಂ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ. ನಾಗರಿಕ ವಿಮಾನಯಾನ ಸೇವೆ ಪುನಾರಂಭಕ್ಕೆ ಸಹಕರಿಸಿದ ಸಿಎಂ, ಡಿಸಿಎಂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದ ಅರ್ಪಿಸುವುದಾಗಿ ಖಂಡ್ರೆ ತಿಳಿಸಿದರು.

200 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿ ಉದ್ಘಾಟನೆ :

ಜಿಲ್ಲೆಯಲ್ಲಿ ಸುಮಾರು ₹200 ಕೋಟಿಗೂ ಅಧಿಕ ವೆಚ್ಚದಲ್ಲಿ ಹಲವು ಪೂರ್ಣಗೊಂಡಿದ್ದು, ಔರಾದ್ ತಾಲ್ಲೂಕಿನ ನಾಗೂರ್ (ಬಿ) ಗ್ರಾಮದಲ್ಲಿ 220 ಕೆ.ವಿ. ಉಪಕೇಂದ್ರಗಳ ಉದ್ಘಾಟನೆ (₹114 ಕೋಟಿ) ಬೀದರ್ ನಗರಸಭೆ ಮತ್ತು ಭಾಲ್ಕಿ ಪುರಸಭೆ ವ್ಯಾಪ್ತಿಯ ವಿವಿಧ ಕಾಮಗಾರಿಗಳು (₹49 ಕೋಟಿ), ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಭಾಲ್ಕಿಯಲ್ಲಿ 400 ಮನೆಗಳ ಹಸ್ತಾಂತರ (₹23 ಕೋಟಿ), ಬ್ರಿಮ್ಸ್ ನಲ್ಲಿ ಹೃದ್ರೋಗ ಚಿಕಿತ್ಸಾ ಘಟಕ ಮತ್ತು ಕ್ಯಾಥ್ ಲ್ಯಾಬ್ (₹15.11 ಕೋಟಿ) ಹಾಗೂ ವಿದ್ಯಾರ್ಥಿ ನಿಲಯ, ಅಂಗನವಾಡಿ ಕೇಂದ್ರ, ಶಾಲೆ ಮತ್ತು ಆರೋಗ್ಯ ಕೇಂದ್ರ ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆʼ ಎಂದು ತಿಳಿಸಿದರು.

ಶಂಕುಸ್ಥಾಪನೆ ನೆರೆವೇರಲಿರುವ ಕಾಮಗಾರಿ :

ಭಾಲ್ಕಿ ತಾಲ್ಲೂಕಿನ ಮೆಹಕರ್ ಏತ ನೀರಾವರಿ ಯೋಜನೆ ಹಾಗೂ ಔರಾದ್ ತಾಲ್ಲೂಕಿನ 36 ಕೆರೆ ತುಂಬಿಸುವ ಯೋಜನೆ (₹582 ಕೋಟಿ), ಬೀದರ್ ತಾಲ್ಲೂಕಿನ ಬಗದಲ್ ಹಾಗೂ ಇತರ 104 ಜನವಸತಿ ಮತ್ತು ಚಿಟಗುಪ್ಪಾ ತಾಲ್ಲೂಕಿನ ಮನ್ನಾಖೇಳಿ ಹಾಗೂ 32 ಜನ ವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ (₹330 ಕೋಟಿ ), ಬೀದರ್ ನಗರಸಭೆ, ಬಸವಕಲ್ಯಾಣ, ಭಾಲ್ಕಿ, ಹುಮನಾಬಾದ್, ಚಿಟಗುಪ್ಪ ಮತ್ತು ಔರಾದ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನ ಅಭಿವೃದ್ಧಿ (₹100 ಕೋಟಿ), ಬೀದರ್ ನಗರಸಭೆ, ಹುಮನಾಬಾದ್ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಉನ್ನತೀಕರಣ (₹80 ಕೋಟಿ ) ಕಾಮಗಾರಿಗಳಿಗೆ ಶಂಕುಸ್ಥಾಪನೆ ಆಗಲಿದೆ.

ʼಔರಾದ್ ತಾಲ್ಲೂಕಿನ ಹಂಗರಗಾ-ಸಾವರಗಾಂವ್ ನಡುವೆ ಬ್ರಿಜ್ ಕಂ ಬ್ಯಾರೇಜ್ (₹70 ಕೋಟಿ), ಜಿಲ್ಲಾಡಳಿತ ಕಚೇರಿ ಕಟ್ಟಡ ನಿರ್ಮಾಣ (ಪ್ರಜಾಸೌಧ- ₹48 ಕೋಟಿ), ನೂತನ ತಾಲ್ಲೂಕುಗಳಾದ ಚಿಟಗುಪ್ಪ, ಕಮಲನಗರ ಹಾಗೂ ಹುಲಸೂರ ಆಡಳಿತ ಕೇಂದ್ರ ಕಟ್ಟಡ ನಿರ್ಮಾಣ (₹25 ಕೋಟಿ), ಹೊನ್ನಿಕೇರಿ ಮೀಸಲು ಅರಣ್ಯದಲ್ಲಿ ಪರಿಸರ ಪ್ರವಾಸೋದ್ಯಮ ಯೋಜನೆ (₹15 ಕೋಟಿ), ಭಾಲ್ಕಿಯಲ್ಲಿ ಅತ್ಯಾಧುನಿಕ 150 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣ (₹16 ಕೋಟಿ), ಭಾಲ್ಕಿಯಲ್ಲಿ ಹೊರಾಂಗಣ ಕ್ರೀಡಾ ಸಮುಚ್ಛಯ (₹15 ಕೋಟಿ) ಹಾಗೂ ಭಾಲ್ಕಿ ಆರ್‌ಟಿಒ ಕಚೇರಿ ಮತ್ತು ವಾಹನ ಚಾಲನಾ ಪರೀಕ್ಷಾ ಪಥ ಸೇರಿದಂತೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆʼ ಎಂದು ಮಾಹಿತಿ ನೀಡಿದರು.

ಅಭಿವೃದ್ಧಿಯೇ ಕಾಂಗ್ರೆಸ್ ಸರ್ಕಾರದ ಮಂತ್ರ :

ʼಅಭಿವೃದ್ಧಿಯೇ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರ್ಕಾರದ ಮಂತ್ರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿಗೆ ಅದರಲ್ಲೂ ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದರ ಫಲವಾಗಿ ಸುಮಾರು ₹2,025 ಕೋಟಿ ವೆಚ್ಚದ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅವರೇ ಶಂಕುಸ್ಥಾಪನೆ ಮತ್ತು ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ನೆರವೇರುತ್ತಿದೆʼ ಎಂದರು.

ʼವಾಸ್ತವವಾಗಿ ₹2,400 ಕೋಟಿ ರೂ.ಗೂ ಅಧಿಕ ಮೌಲ್ಯದ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರುತ್ತಿದೆ. ಇದು 2025ನೇ ಇಸವಿ ಆಗಿರುವ ಹಿನ್ನೆಲೆಯಲ್ಲಿ ₹2,025 ಕೋಟಿ ರೂ. ಯೋಜನೆಗಳನ್ನು ಘೋಷಿಸುತ್ತಿದ್ದೇವೆʼ ಎಂದು ತಿಳಿಸಿದರು.

ʼಏ.16ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಎಚ್.ಕೆ. ಪಾಟೀಲ್, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ವೆಂಕಟೇಶ್, ಎನ್.ಎಸ್. ಬೋಸರಾಜ್, ಝಮೀರ್ ಅಹ್ಮದ್ ಖಾನ್, ರಹೀಂಖಾನ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ್, ಸಂಸತ್ ಸದಸ್ಯರು ಸೇರಿದಂತೆ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

WhatsApp Image 2025 04 13 at 10.11.12 PM
ದಿ. 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಹಿನ್ನೆಲೆಯಲ್ಲಿ ಸಚಿವರಾದ ಈಶ್ವರ ಖಂಡ್ರೆ ಹಾಗೂ ರಹೀಂ ಖಾನ್ ಅವರು ನಗರದ ನೆಹರು ಕ್ರಿಡಾಂಗಣದಲ್ಲಿ ಸಿದ್ಧತೆ ಪರಿಶೀಲಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ನಾಳೆ ಮೆಗಾ ರಕ್ತದಾನ ಶಿಬಿರ

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಓ ಡಾ.ಗಿರೀಶ್ ದಿಲೀಪ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X