ಭಾನುವಾರ ಬೆಳಿಗ್ಗೆ ವಿಜಯನಗರದ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬ ಆರೋಪಿ ಮೇಲೆ ಭಾನುವಾರ ಸಂಜೆ ಹುಬ್ಬಳ್ಳಿಯ ತಾರಿಹಾಳ ಸೇತುವೆ ಬಳಿ ಅಶೋಕನಗರ ಠಾಣಾ ಪೊಲೀಸರ ಗುಂಡೇಟಿಗೆ ಆರೋಪಿ ಮೃತಪಟ್ಟಿದ್ದಾನೆ.
ಮನೆಯಂಗಳದಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿಯನ್ನು ಅಪಹರಸಿ ಅತ್ಯಾಚಾರಕ್ಕೆ ಯತ್ನಿಸಿದಾಗ ಬಾಲಕಿ ಕಿರುಚಿಕೊಳ್ಳುತ್ತಾಳೆ. ಕೊನೆಗೆ ಬಾಲಕಿಯನ್ನು ಕೊಲೆ ಮಾಡಿದ್ದು, ತಗಡಿನ ಶೆಡ್ ಒಂದರಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿತ್ತು. ತದನಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದರು. ಹುಬ್ಬಳ್ಳಿಯ ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಗುಂಡು ಹಾರಿಸಿದ್ದಾರೆ. ಈ ಸಮಯದಲ್ಲಿ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ್ದಾಗ ಮತ್ತೆ ಹಾರಿಸಿದ ಗುಂಡೇಟಿಗೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಹುಬ್ಬಳ್ಳಿಯಲ್ಲಿ ಕೆಲಸ ಮಾಡಿಕೊಂಡು ತಗಡಿನ ಶೆಡ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ಆರೋಪಿ ರಿತೇಶ ಅನ್ನು ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸ್ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇನ್ನು ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ ₹10 ಲಕ್ಷ ಪರಿಹಾರವನ್ನು ನೀಡುವ ಕುರಿತು ತಿಳಿದುಬಂದಿದೆ.