13 ಸಾವಿರ ಕೋಟಿ ಪಿಎನ್‌ಬಿ ಬ್ಯಾಂಕ್ ಸಾಲ ವಂಚನೆ: ಆರೋಪಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

Date:

Advertisements

13,000 ಕೋಟಿ ರೂ. ಪಂಬಾಬ್‌ ನ್ಯಾಷನಲ್‌ ಬ್ಯಾಂಕ್‌ಸಾಲ ‘ವಂಚನೆ’ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಾರತೀಯ ತನಿಖಾ ಸಂಸ್ಥೆಗಳು ಹಸ್ತಾಂತರ ಕೋರಿದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ವಜ್ರಾಭರಣ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದ. 2018 ರಲ್ಲಿ ಇ.ಡಿ 1,217 ಕೋಟಿ ಮೌಲ್ಯದ ಚೋಕ್ಸಿಯ 41 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿತ್ತು.

ಮುಂಬೈನ ಐಷಾರಾಮಿ ಪ್ರದೇಶದಲ್ಲಿರುವ ಅವರ 2 ಫ್ಲಾಟ್‌ಗಳು, ಕೋಲ್ಕತ್ತಾದ ಮಾಲ್, ಮುಂಬೈ-ಗೋವಾ ಹೆದ್ದಾರಿಯಲ್ಲಿ 27 ಎಕರೆ ಭೂಮಿ, ತಮಿಳುನಾಡಿನಲ್ಲಿ 101 ಎಕರೆ ಜಮೀನು, ಆಂಧ್ರಪ್ರದೇಶದ ನಾಸಿಕ್, ನಾಗ್ಪುರದಲ್ಲಿನ ಜಮೀನುಗಳು, ಅಲ್ಲಾಬಾಗ್‌ನಲ್ಲಿರುವ 2 ಬಂಗಲೆಗಳು ಮತ್ತು ಸೂರತ್‌ನಲ್ಲಿರುವ ಕಚೇರಿಯನ್ನು ಇಡಿ ವಶಪಡಿಸಿಕೊಂಡಿತ್ತು. ಈವರೆಗೆ ಇಡಿ ಚೋಕ್ಸಿ ವಿರುದ್ಧ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಿದೆ. 2019ರಲ್ಲಿ ಚೋಕ್ಸಿ ದೇಶದಿಂದ ಪರಾರಿಯಾಗಿದ್ದ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ ಒಪ್ಪುತ್ತಿಲ್ಲ – ಮೋದಿಗೆ ಮತ್ತೊಬ್ಬ ‘ರಬ್ಬರ್‌ ಸ್ಟ್ಯಾಂಪ್‌’ ಸಿಗುತ್ತಿಲ್ಲ!

65 ವರ್ಷದ ಚೋಕ್ಸಿ 2023ರ ನವೆಂಬರ್‌ 15ರಿಂದ ʻಎಫ್‌- ರೆಸಿಡೆನ್ಸಿʼ ಪೌರತ್ವ ಕಾರ್ಡ್‌ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದ. ಅವನ ಪತ್ನಿ ಬೆಲ್ಜಿಯಂನವರೇ ಆದ ಕಾರಣ ಪೌರತ್ವ ದಾಖಲೆ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಲು ಚೋಕ್ಸಿ ಅವರಿಗೆ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

2024ರ ಸೆಪ್ಟೆಂಬರ್‌ನಲ್ಲಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತನಿಖಾ ಸಂಸ್ಥೆಗಳು ಬೆಲ್ಜಿಯಂಗೆ ಮನವಿ ಮಾಡಿದ್ದವು. ಆದ್ರೆ ಅಂದು ಚೋಕ್ಸಿ ಪರ ವಕೀಲರು, ನನ್ನ ಕಕ್ಷಿಗಾರನ ಆರೋಗ್ಯ ಸರಿಯಿಲ್ಲ, ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಆದ್ದರಿಂದ ಅವರನ್ನು ಹಸ್ತಾಂತರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಅಧಿಕಾರಿಗಳು, ಚೋಕ್ಸಿ ಭಾರತದಲ್ಲೂ ಚಿಕಿತ್ಸೆ ಪಡೆಯಬಹುದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಇ.ಡಿ ಮತ್ತು ಸಿಬಿಐನಿಂದ ಹಸ್ತಾಂತರ ಕೋರಿಕೆಯ ಮೇರೆಗೆ ಬೆಲ್ಜಿಯಂ ಪೊಲೀಸರು ಚೋಕ್ಸಿಯನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

Download Eedina App Android / iOS

X