ಕೊಪ್ಪಳ | ʼಸದೃಢ ಭಾರತ ನಿರ್ಮಾಣಕ್ಕಾಗಿ ವ್ಯಕ್ತಿತ್ವ ವಿಕಸನ ಅಗತ್ಯʼ

Date:

Advertisements

ಭಗತ್ ಸಿಂಗ್ ಹಾಗೂ ನೇತಾಜಿ ಅವರ ಕನಸಿನಂತೆ ಸಮಾಜವಾದಿ ಸದೃಢ ಭಾರತ ನಿರ್ಮಿಸಲು ವ್ಯಕ್ತಿತ್ವ ವಿಕಸನ ಅಗತ್ಯವಾಗಿದೆ. ಇದಕ್ಕೆ ಪ್ರತಿಯೊಬ್ಬರೂ ಸಜ್ಜಾಗಿ ಎಂದು ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಲ್ಯಾಣ ವಿ ಕರೆ ನೀಡಿದರು.

ಕೊಪ್ಪಳ ನಗರ ಕೃಷಿ ವಿದ್ಯಾರಣ್ಯ ಭವನದಲ್ಲಿ ಭಗತ್ ಸಿಂಗ್ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕನಸಿನ ಭಾರತ ಕುರಿತು ಆಯೋಜಿಸಿರುವ ಎರಡು ದಿನದ ಜಿಲ್ಲಾ ಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಅವರು ಮಾತನಾಡಿದರು.

“ಇತಿಹಾಸದಲ್ಲಿ ವಿವಿಧ ದೇಶಗಳಲ್ಲಿ ಆಯಾ ಕಾಲ ಘಟ್ಟಕ್ಕೆ ಹಲವಾರು ಮಹಾನ್ ವ್ಯಕ್ತಿಗಳ ಉದಯವಾಗಿದೆ. ಅದೇ ರೀತಿ ಭಾರತದ ನವೋದಯ ಕಾಲದಲ್ಲಿ ವಿದ್ಯಾ ಸಾಗರ, ರಾಜಾರಾಮ್ ಮೋಹನ್ ರಾಯ್, ಸಾವಿತ್ರಿಬಾಯಿ ಫುಲೆ, ಜ್ಯೋತಿ ಬಾ ಪುಲೆ ಮುಂತಾದವರು ಇದ್ದರು. ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಉದಯಿಸಿದ ಮಹಾನ್ ವ್ಯಕ್ತಿತ್ವಗಳಲ್ಲಿ ನೇತಾಜಿ ಹಾಗೂ ಭಗತ್ ಸಿಂಗ್ ಮುಂಚೂಣಿಯಲ್ಲಿದ್ದವರು. ಸ್ವಾತಂತ್ರ್ಯ ಸಂಗ್ರಾಮದ ನೈಜ ಗುರಿಯನ್ನು ಸ್ಪಷ್ಟವಾಗಿ, ನಿಖರವಾಗಿ ಭಗತ್ ಸಿಂಗ್ ಮತ್ತು ನೇತಾಜಿ ಸಾರಿದರು. ರಷ್ಯಾದಲ್ಲಿ ನಡೆದ ಕ್ರಾಂತಿ ಭಾರತದ ಕ್ರಾಂತಿಕಾರಿಗಳ ಮೇಲೆ ಗಾಢ ಪ್ರಭಾವ ಬೀರಿತ್ತು. ಭಗತ್ ಸಿಂಗ್ ಮತ್ತು ನೇತಾಜಿ ಇಬ್ಬರೂ ರಷ್ಯಾ ಮಾದರಿ ಸಮಾಜವಾದಿ ಭಾರತ ನಿರ್ಮಿಸಬೇಕೆಂಬ ಆಶಯ ಹೊಂದಿದ್ದರು. ಮಾನವನಿಂದ ಮಾನವನ ಶೋಷಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕೆಂಬುದು ಅವರ ನಿಲುವಾಗಿತ್ತು” ಎಂದರು.

Advertisements

“ನೇತಾಜಿಯವರು ಭಾರತದಲ್ಲಿ ಕ್ರಾಂತಿಯಾಗಬೇಕು, ಆ ಕ್ರಾಂತಿಯನ್ನು ದೇಶದ ಸಂಪತ್ತನ್ನು ಸೃಷ್ಟಿ ಮಾಡುವ ಕಾರ್ಮಿಕರು ಹಾಗೂ ರೈತರು ನಡೆಸಬೇಕೆಂಬ ಕನಸು ಕಂಡಿದ್ದರು. ಆದರೆ, ಅವರ ಕನಸು ಕನಸಾಗಿಯೇ ಉಳಿದಿದೆ. ಯಾವ ಕ್ರಾಂತಿ ಜನತೆಗೆ ಸ್ವಾತಂತ್ರ್ಯವನ್ನು ತಂದುಕೊಟ್ಟು ಮಾನವನಿಂದ ಮಾನವನ ಶೋಷಣೆಯನ್ನು ಅಸಾಧ್ಯಗೊಳಿಸುತ್ತದೆಯೋ, ಅಂತಹ ಕ್ರಾಂತಿಯ ಸಂದೇಶವನ್ನು ವಿದ್ಯಾರ್ಥಿಗಳು ಹಾಗೂ ಯುವಜನರು ದೇಶದ ಮೂಲೆಮೂಲೆಗೂ ಒಯ್ಯಬೇಕು. ಕೋಟ್ಯಂತರ ಮರ್ದಿತ ಜನರಿಗೆ ತಲುಪಿಸಬೇಕು. ಶೋಷಣೆಗೆ ಮುಕ್ತಾಯ ಹಾಡಲು ಸಮಾಜವಾದಿ ಕ್ರಾಂತಿ ಅನಿವಾರ್ಯ ಎಂದು ಭಗತ್ ಸಿಂಗ್ ನಂಬಿದ್ದರು. ಇಂದಿನ ಎಲ್ಲಾ ಯುವಕರು ಅವರ ಹಾದಿಯಲ್ಲಿ ಸಾಗಬೇಕು” ಎಂದು ತಿಳಿಸಿದರು.

“ಪ್ರಸ್ತುತ ಸಮಾಜದಲ್ಲಿ 20 ಕೋಟಿ ಜನ ಹಸಿವೆಯಿಂದ ನರಳುತ್ತಿದ್ದಾರೆ. ಪ್ರತಿದಿನ 4500 ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿದ್ದಾರೆ. 7000 ಜನರು ಪ್ರತಿದಿನ ಹಸಿವೆಯಿಂದ ಸಾಯುತ್ತಿದ್ದಾರೆ. ಶಿಕ್ಷಣದ ವ್ಯಾಪಾರೀಕರಣ, ಹೆಣ್ಣು ಮಕ್ಕಳ ಮೇಲಿನ ಅಪರಾಧಗಳು ಹಾಗೂ ರೈತ ಕಾರ್ಮಿಕರ ಸಾವು ಮಿತಿಮೀರಿದೆ. ಇವೆಲ್ಲ ಸಮಸ್ಯೆಗಳನ್ನು ತೊಡೆದು ಹಾಕಬೇಕೆಂದರೆ ಸಮಾಜವಾದಿ ಭಾರತ ಮಾತ್ರವೇ ಸಾಧ್ಯ ಎಂದು ಭಗತ್ ಸಿಂಗ್ ಮತ್ತು ನೇತಾಜಿ ನಂಬಿದ್ದರು. ಹೀಗಾಗಿ, ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ವಿದ್ಯಾರ್ಥಿ ಯುವ ಸಮೂಹ ಸಜ್ಜಾಗಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ: ಕೊಪ್ಪಳ | ಸೌಜನ್ಯ ಕೊಲೆ ಪ್ರಕರಣ; ಉನ್ನತ ತನಿಖೆಗೆ ಆಗ್ರಹ

ಎಐಡಿಎಸ್ಒ ಜಿಲ್ಲಾ ಸಂಚಾಲಕ ಗಂಗಾರಾಜ ಅಳ್ಳಳ್ಳಿ, ಜಿಲ್ಲಾ ಸಂಘಟನಕಾರ ಸದಾಶಿವ, ಸವಿತ, ಪಲ್ಲವಿ, ಬಾಬು, ಕವಿತಾ, ನವೀನ್, ಗಿರೀಶ್, ಶಾರದ, ರಮೇಶ್, ಅಶೋಕ್ ,ಅಂಜುಮ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X