ವರ್ಸೋವಾ-ಬಾಂದ್ರಾ ಸೀ ಲಿಂಕ್‌ಗೆ ಸಾವರ್ಕರ್ ಹೆಸರಿಟ್ಟು ಮಹಾರಾಷ್ಟ್ರ ಸರ್ಕಾರದಿಂದ ವಿವಾದ ಸೃಷ್ಟಿ

Date:

Advertisements

ಮಹಾರಾಷ್ಟ್ರ ಸರ್ಕಾರವು ಮುಂಬೈನ ವರ್ಸೋವಾ-ಬಾಂದ್ರಾ ಸಂಪರ್ಕ ಸೇತುವೆಗೆ ‘ಸಾವರ್ಕರ್ ಸೇತು’ ಎಂದು ಮರುನಾಮಕರಣ ಮಾಡಿ ವಿವಾದ ಸೃಷ್ಟಿಸಿದೆ.

ಮೇ 28 ರಂದು ಸಾವರ್ಕರ್ ಜನ್ಮದಿನದಂದು ಮಾತನಾಡಿದ್ದ ಮುಖ್ಯಮಂತ್ರಿ ಏಕನಾಥ ಶಿಂಧೆ, ವರ್ಸೋವಾ-ಬಾಂದ್ರಾ ಸಂಪರ್ಕ ಸೇತುವೆಗೆ ಸಾವರ್ಕರ್ ಹೆಸರಿಡುವುದಾಗಿ ಘೋಷಿಸಿದ್ದರು. ಹಾಗೆಯೇ ಮುಂಬೈ ಬಂದರು ಸಾರಿಗೆ ಸಂಪರ್ಕ ಸೇತುವೆಗೆ ಅಟಲ್ ಬಿಹಾರಿ ವಾಜಪೇಯಿ ಸ್ಮೃತಿ ನವಾ ಸೇವಾ ಅಟಲ್ ಸೇತು ಎಂದು ಮರುನಾಮಕರಣ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಏಕರೂಪ ನಾಗರಿಕ ಸಂಹಿತೆ: ಪ್ರಧಾನಿ ಹೇಳಿಕೆ ಬೆನ್ನಲ್ಲೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ತುರ್ತು ಸಭೆ

Advertisements

ಮುಂಬಯಿಯ ವರ್ಸೋವಾದಿಂದ ಬಾಂದ್ರಾವರೆಗೆ ಸಮುದ್ರ ಮಾಗ್ರದಲ್ಲಿ ಸಂಪರ್ಕಿಸುವ ಈ ಸೇತುವೆ ಇನ್ನೂ ನಿರ್ಮಾಣ ಹಂತದಲ್ಲಿದೆ. ಸುಮರು 17.17 ಕಿ.ಮೀ ಉದ್ದವಿದೆ. 8 ಪಥದ ಈ ಸಮುದ್ರ ಸಂಪರ್ಕ ಸೇತುವೆಯಿಂದ ಮುಂಬೈನ ಪಶ್ಚಿಮ ಎಕ್ಸ್‌ಪ್ರೆಸ್ ಹೈವೆ ಮತ್ತು ಪೂರ್ವದಲ್ಲಿರುವ ಮುಂಬೈನ ಸಬ್‌ ಅರ್ಬನ್‌ ರೈಲ್ವೆ ಮಾರ್ಗದಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲಿದೆ.

ಕಳೆದ ಕೆಲವು ದಿನಗಳ ಹಿಂದಷ್ಟೆ ನಡೆದ 101 ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಸ್ವಾತಂತ್ರ್ಯ ಚಳವಳಿಯಲ್ಲಿ ಮಾತ್ರವಲ್ಲ, ಸಾಮಾಜಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸಾವರ್ಕರ್ ಅವರು ಮಾಡಿದ್ದೆಲ್ಲ ಇಂದಿಗೂ ಸ್ಮರಣೀಯವಾಗಿದೆ” ಎಂದಿದ್ದರು. ಆದರೆ ವಿಪಕ್ಷಗಳು ಪ್ರಧಾನಿ ಸಾವರ್ಕರ್‌ ಬಗ್ಗೆ ಮಾಡಿದ ಭಾಷಣವನ್ನು ಖಂಡಿಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X