ಉಡುಪಿ | ಸಂಘಟಿತ ಹೋರಾಟದ ಮೂಲಕ‌ ಜಯ ಸಾಧಿಸಿ, ಕುಂದಾಪುರದಲ್ಲಿ “ಭೀಮೋತ್ಸವ – 2025”

Date:

Advertisements

ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ರ 134ನೇ ಜನ್ಮದಿನಾಚರಣೆ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಲಯನ್ಸ್ ಸ್ಟೇರ್‌ನಲ್ಲಿ ಇಂದು ‘ಭೀಮೋತ್ಸವ-2025’ ಕಾರ್ಯಕ್ರಮ ನಡೆಯಿತು.

1005039865

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಗೋಪಲ ಪೂಜಾರಿ, ಡಾ.ಬಿ.ಆರ್.ಅಂಬೇಡ್ಕ‌ರ್ ಅವರ ತತ್ವಾದರ್ಶ ಗಳನ್ನು ಪ್ರತಿಯೊಬ್ಬರೂ ಬೆಳೆಸಿ ಕೊಳ್ಳಬೇಕು. ಶಾಂತಿ, ಸೌಹಾರ್ದತೆ, ಸಹೋದರತೆಯನ್ನು ಮೈಗೂಡಿಸಿಕೊಂಡು ಸಂಘಟಿತ ಹೋರಾಟದ ಮೂಲಕ ಜಯ ಸಾಧಿಸಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಂಘಟನೆ ಅಂಬೇಡ್ಕರ್ ಹಾಕಿಕೊಟ್ಟ ಹೆಜ್ಜೆಯಲ್ಲಿ ಸಾಗಿ ನಿರಂತರವಾಗಿ ಸಕ್ರೀಯವಾಗಿದ್ದುಕೊಂಡು ಸರಕಾರ ಹಾಗೂ ಜನಪ್ರತಿನಿಧಿ ಗಳನ್ನು ಎಚ್ಚರಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

1005039875

ಕರ್ನಾಟಕ ದಸಂಸ ಅಂಬೇಡ್ಕವಾದ ಇದರ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು ಪ್ರಧಾನ ಭಾಷಣ ಮಾಡಿ, ಶೋಷಿತ ಸಮುದಾಯ ನೆಮ್ಮದಿಯ ಬದುಕು ಸಾಗಿಸಲು, ಮಹಿಳೆಯರು ತಮ್ಮ ಹಕ್ಕು ಪಡೆಯಲು ಶತಮಾನಗಳ ಹಿಂದೆ ನೂರಾರು ದಾರ್ಶನಿಕರು ಕಾಲಕಾಲಕ್ಕೆ ಅಗತ್ಯ ಹೋರಾಟ ನಡೆಸಿ ಸಮಾಜ ತಿದ್ದುವ ಕೆಲಸ ಮಾಡಿದ್ದರಿಂದ ಸಮಸಮಾಜ ನಿರ್ಮಾಣವಾಗಲು ಸಾಧ್ಯವಾಯಿತು. ಅವರ ಕೊಡುಗೆಗಳನ್ನು ಮರೆಯಬಾರದು ಎಂದರು.

Advertisements
1005039871

ದಸಂಸ ಜಿಲ್ಲಾ ಸಮಿತಿ ಈ ವರ್ಷದಿಂದ ಅಂಬೇಡ್ಕ‌ರ್ ಹೆಸರಿನಲ್ಲಿ ಪ್ರಾರಂಭಿಸಿದ ‘ಭೀಮ ಸಾರಥಿ ಪ್ರಶಸ್ತಿ’ ಯನ್ನು ಕೊರಗ ಸಮುದಾಯದ ಪರವಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಪೆರ್ನಾಲು ಸಮಗ್ರ ಗ್ರಾಮೀಣ ಆಶ್ರಮದ ಅಶೋಕ್‌ ಕುಮಾರ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು. ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಪ್ರಶಸ್ತಿ ಪ್ರದಾನಿಸಿ ಶುಭಹಾರೈಸಿದರು.

ಕರ್ನಾಟಕ ದಸಂಸ ಅಂಬೇಡ್ಕರ್‌ವಾದ ರಾಜ್ಯ ಸಂಘಟನಾ ಸಂಚಾಲಕ ಸುಂರ್ದ ಮಾರ್ಸ್ತ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಅಶಕ್ತರಿಗೆ ನೆರವು, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ಸಂದರ್ಭದಲ್ಲಿ ಈದಿನ.ಕಾಮ್ ವತಿಯಿಂದ ಹೊರತಂದ ‘ಅರಿವೆ ಅಂಬೇಡ್ಕ‌ರಾ’ ಪುಸ್ತಕ ಬಿಡುಗಡೆ ಮಾಡಲಾಯಿತು.

1005039863

ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಮೌಲಾ, ಕುಂದಾಪುರ ಡಿವೈಎಸ್ಪಿ ಎಚ್‌.ಡಿ ಕುಲಕರ್ಣಿ, ಪುರಸಭಾ ಸದಸ್ಯೆ ದೇವಕಿ ಸಣ್ಣಯ್ಯ ಮಾಜಿ ಪುರಸಭಾಧ್ಯಕ್ಷೆ ಕಲಾವತಿ ರವಿಶಂಕರ್, ಸಮುದಾಯ ಸಂಘಟನೆ ಕುಂದಾಪುರದ ಸದಾನಂದ ಬೈಂದೂರು, ಕರ್ನಾಟಕ ದಸಂಸ ಅಂಬೇಡ್ಕರ್ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾ ಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಸಂಘಟನೆ ಸಂಚಾಲಕರಾದ ಶ್ಯಾಮಸುಂದರ್ ತೆಕ್ಕಟ್ಟೆ, ಸುರೇಶ್ ಹಕ್ಲಾಡಿ, ಮಂಜುನಾಥ ನಾಗೂರು, ರಾಜೇಂದ್ರನಾಥ್, ಅಣ್ಣಪ್ಪ ನಕ್ರೆ, ದೇವಣ್ಣ ಹೆಬ್ರಿ, ಭಾಸ್ಕರ ನಿಟ್ಟೂರು, ಕೊರಗ ಸಂಘಟನೆ ಮುಖಂಡರಾದ ಸುಶೀಲಾ ನಾಡ, ಕುಮಾರದಾಸ್ ಹಾಲಾಡಿ, ದಸಂಸ ಸಂಘಟನೆ ವಿವಿಧ ತಾಲೂಕು ಸಂಚಾಲಕರುಗಳು, ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

1005039889

ದಸಂಸ ಅಂಬೇಡ್ಕ‌ರ್ ವಾದ ಕುಂದಾಪುರ ತಾಲೂಕು ಸಂಚಾಲಕ ಕೆ.ಸಿ. ರಾಜು ಬೆಟ್ಟಿನಮನೆ ಸ್ವಾಗತಿಸಿದರು. ರವಿ ಬನ್ನಾಡಿ ಸಂವಿಧಾನ ಪೀಠಿಕೆ ಬೋಧಿಸಿದರು. ಸಮೀಕ್ಷಾ ಹಕ್ಲಾಡಿ ಹೋರಾಟ ಗೀತೆ ಹಾಡಿದರು. ಶಂಭು ಗುಡ್ಡಮ್ಮಾಡಿ, ಚೈತ್ರಾ ಯಡ್ತರೆ ಕಾರ್ಯಕ್ರಮ ನಿರೂಪಿಸಿ, ಸುರೇಶ್ ಹಕ್ಲಾಡಿ ವಂದಿಸಿದರು.

1005039872
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X