ರಾಜ್ಯದ 31 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ

Date:

Advertisements

ಮೂರು ವಾರಗಳ ತಡವಾಗಿ ಮುಂಗಾರು ಮಾರುತಗಳು ರಾಜ್ಯ ಪ್ರವೇಶಿಸಿವೆ. ಆದರೂ, ರಾಜ್ಯದಲ್ಲಿ ವಾಡಿಕೆಯ ಮಳೆಯಾಗುತ್ತಿಲ್ಲ. ಹಲವೆಡೆ ಇನ್ನೂ ಮಳೆ ಹನಿಗಳು ಭೂಮಿಯನ್ನು ಸ್ಪರ್ಷಿಸಿಲ್ಲ. ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ 16 ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ ಎಂದು ತಿಳಿದುಬಂದಿದೆ.

ಈ 16 ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮತ್ತು ನಗರಗಳಿಗೆ ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಲಾಗುತ್ತಿದೆ. ಮುಂದಿನ ಕೆಲವು ವಾರಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರೆ, ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಪ್ರಕಾರ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ ಸಂಗ್ರಹಣೆ 149.9 ಟಿಎಂಸಿ ಅಡಿ (ಒಟ್ಟು ಸಾಮರ್ಥ್ಯ 865.20 ಟಿಎಂಸಿ ಅಡಿ) ಮಾತ್ರವೇ ಇದೆ. 2022 ರಲ್ಲಿ, ಇದೇ ಅವಧಿಯಲ್ಲಿ ಜಲಾಶಯಗಳಲ್ಲಿನ ಸಂಗ್ರಹವು 283.86 ಟಿಎಂಸಿ ಅಡಿ ಇತ್ತು.

Advertisements

31 ಜಿಲ್ಲೆಗಳ ಪೈಕಿ ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ಚಿತ್ರದುರ್ಗ ಹೊರತುಪಡಿಸಿ, ಹೆಚ್ಚಿನ ಜಿಲ್ಲೆಗಳು ಜೂನ್ 1 ರಿಂದ 27 ರವರೆಗಿನ ಅವಧಿಗೆ ಮಳೆ ಕೊರತೆ ಎದುರಿಸಿವೆ. ಇದು ಕೃಷಿ ಚಟುವಟಿಕೆಗಳಿಗೆ ಮಾತ್ರವಲ್ಲ, ಕುಡಿಯುವ ನೀರಿನ ಪೂರೈಕೆಗೂ ತೊಂದರೆಯಾಗಿದೆ.

“ಮುಂದಿನ ಎರಡು ತಿಂಗಳವರೆಗೆ ಕುಡಿಯುವ ನೀರಿನ ಪೂರೈಕೆಗಾಗಿ ತಾತ್ಕಾಲಿಕ ಯೋಜನೆಗಳನ್ನು ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ನೀರು ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ನಾವು ಹೇಳಿದ್ದೇವೆ. ನೀರಿನ ಟ್ಯಾಂಕರ್‌ಗಳನ್ನು ಬಾಡಿಗೆಗೆ ಪಡೆಯಲು ಸೂಚಿಸಿದ್ದೇವೆ. ಇದಕ್ಕಾಗಿ ಅಂದಾಜು ಪಟ್ಟಿಯನ್ನು ತಯಾರಿಸುವಂತೆಯೂ ಹೇಳಿದ್ದೇವೆ” ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ಕೆ ಅತೀಕ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X