ಬೀದರ್ ಜಿಲ್ಲೆ ಔರಾದ್ ತಾಲೂಕಿನ ಹಲವು ಗ್ರಾಮಗಳಿಗೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಔರಾದ್ ತಾಲೂಕು ಬಸ್ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು. “ಗ್ರಾಮೀಣ ಭಾಗದಿಂದ ಔರಾದ್, ಬೀದರ್ ಸೇರಿದಂತೆ ಹಲವೆಡೆಯಿಂದ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ಸೌಲಭ್ಯವಿಲ್ಲ. ಇದರಿಂದ ವಿದ್ಯಾರ್ಥಿಗಳು ನಿಗದಿತ ತರಗತಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಕರವೇ ಆಗ್ರಹಿಸಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮರಳು ಮಾಫಿಯಾ ತಡೆಗೆ ಆಗ್ರಹ
“ತಾಲೂಕಿನ ಯಾವ ಯಾವ ಮಾರ್ಗಗಳಲ್ಲಿ ಎಷ್ಟು ಬಸ್‌ಗಳಿವೆ ಅಥವಾ ಎಲ್ಲೆಲ್ಲಿ ಬಸ್‌ಗಳಿಲ್ಲ ಎಂಬುದನ್ನು ವರದಿ ಮಾಡಿ ವಾರದೊಳಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ಔರಾದ್ ಬಸ್ ನಿಲುಗಡೆ ಸ್ಥಳದಲ್ಲಿ ತೀವ್ರ ಹೋರಾಟ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಶೆಟ್ಟಿ ಬಣದವರು ಕರವೇ ತಾಲೂಕು ಅಧ್ಯಕ್ಷ ಅನೀಲ ದೇವಕತ್ತೆ, ಬಾಲಾಜಿ ದಾಮ, ನವೀನ್ ರೆಡ್ಡಿ ಸೇರಿದಂತೆ ಇತರರು ಇದ್ದರು.