ಇದು ಜಾತಿಗಣತಿಯೋ ಅಥವಾ ದ್ವೇಷಗಣತಿಯೋ: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ

Date:

Advertisements

ಇದು ಜಾತಿಗಣತಿಯೋ? ಅಥವಾ ದ್ವೇಷಗಣತಿಯೋ? ಒಂದು ಅರ್ಥವಾಗುತ್ತಿಲ್ಲ. ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿ ಕೆ ಶಿವಕುಮಾರ್ ಈಗ ಯೂಟರ್ನ್ ಸಹ ಹೊಡೆದಿದ್ದಾರೆ. ಈ ಜಾತಿ ಜನಗಣತಿ ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧ ಹೋರಾಟಕ್ಕೆ ನಾನು ಶತಸಿದ್ಧ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, “ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ. ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ. ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕೆ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ” ಎಂದು ಹೇಳಿದ್ದಾರೆ.

“ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ” ಎಂದು ಪ್ರಶ್ನಿಸಿದ್ದಾರೆ.

Advertisements

ಪೆನ್ನೂ ಪೇಪರ್ ಕೇಳಿದ್ದ ಡಿಕೆಶಿಗೆ ಟಾಂಗ್

ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, ‘ಒಂದ್‌ ಸಲ ನಂಗೂ ಪೆನ್ನೂ-ಪೇಪರ್‌ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ? ಹಿಂದೊಮ್ಮೆ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾರೆ. ಶಿವ.. ಶಿವಾ..” ಎಂದು ಡಿಸಿಎಂ ಡಿಕೆಶಿಗೆ ಟಾಂಗ್ ನೀಡಿದ್ದಾರೆ.

‘ನಾನ್‌ ಒಂದು ನ್ಯಾಷನಲ್ ಪಾರ್ಟಿ ಸ್ಟೇಟ್ ಪ್ರೆಸಿಡೆಂಟ್ ಕಣ್ರೀ.. ನಂಗೆ ಎಲ್ರೂ ಸಮಾನ! ಈಗಷ್ಟೇ ಕಣ್‌ ತೆರೆದಿದ್ದೇವೆ. ಗಣತಿಗೆ ಯಾರ ವಿರೋಧವೂ ಇಲ್ಲ, ವಿರೋಧವಾದ್ರೂ ಯಾಕಿರುತ್ತೆ ಹೇಳಿ?ʼ ಎಂದ್ಹೇಳಿ ಪ್ರಶ್ನಿಸಿದ ಸುದ್ದಿಗಾರರನ್ನೇ ತಳ್ಳಿಕೊಂಡು ಪಲಾಯನಗೈದರಲ್ಲಾ..? ಪೆನ್ನೂ ಪೇಪರ್‌ ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ. ಕುರ್ಚಿ ದುರಾಸೆಗೆ ಈ ವ್ಯಕ್ತಿ ಅದೇ ಪೆನ್ನಿನಲ್ಲಿ ಸಮಾಜದ ಮರಣಶಾಸನ ಬರೆಯುತ್ತಿದ್ದಾರೆ”ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X