ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಸೋಮವಾರದವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಒಳನಾಡು ಪ್ರದೇಶದಲ್ಲಿಯೂ ಶುಕ್ರವಾರ-ಶನಿವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಭಾರೀ ಮಳೆ ಸುರಿದಿದ್ದು, ಉಡುಪಿಯಲ್ಲಿ 158.3 ಮಿ.ಮೀ, ಮಂಗಳೂರಿನಲ್ಲಿ 141.7 ಮಿ.ಮೀ ಹಾಗೂ ಗೋಕರ್ಣದಲ್ಲಿ 114.8 ಮಿ.ಮೀ ಮಳೆಯಾಗಿದೆ. ಅಲ್ಲದೆ, ಈ ಭಾಗದಲ್ಲಿ ಗಂಟೆಗೆ 40-45 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.
ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಗುರುವಾರ ರಾತ್ರಿ ಮಳೆ ಬೀಳಬಹುದು ಎಂದು ಇಲಾಖೆ ಹೇಳಿದೆ.