ಕೊಡಗು | ರಾಷ್ಟ್ರದಲ್ಲಿನ ಅಸಮಾನತೆ ತೊಡೆದಿದ್ದು ಡಾ. ಬಿ. ಆರ್. ಅಂಬೇಡ್ಕರ್ : ಶಾಸಕ ಡಾ. ಮಂಥರ್ ಗೌಡ

Date:

Advertisements

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಾ. ಮಂಥರ್ ಗೌಡ ‘ ರಾಷ್ಟ್ರದಲ್ಲಿನ ಅಸಮಾನತೆ ತೊಡೆದಿದ್ದು ಡಾ. ಬಿ. ಆರ್. ಅಂಬೇಡ್ಕರ್ ‘ ಎಂದರು.

ಅಮೇರಿಕಾ, ಲಂಡನ್ ಸೇರಿದಂತೆ ವಿದೇಶದಲ್ಲಿ ವ್ಯಾಸಂಗ ಮಾಡಿದವರು ವಾಪಸ್ಸು ದೇಶಕ್ಕೆ ಆಗಮಿಸುವುದು ಕಡಿಮೆ. ಆದರೆ, ಡಾ.ಬಿ.ಆರ್.ಅಂಬೇಡ್ಕರ್ ಅವರು ವಿದೇಶದಲ್ಲಿ ಅಧ್ಯಯನ ಮಾಡಿ ರಾಷ್ಟ್ರಕ್ಕೆ ಆಗಮಿಸಿ ಸಂವಿಧಾನ ರಚಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ಹಗಲಿರುಳು ಶ್ರದ್ಧೆ ವಹಿಸಿ ಸಮ ಸಮಾಜ ನಿರ್ಮಾಣಕ್ಕೆ ಕಾರಣರಾದವರು. ಶಿಕ್ಷಣಕ್ಕೆ ಹೆಚ್ಚಿನ‌ ಒತ್ತು ನೀಡಿ. ಶಿಕ್ಷಣದಿಂದ ಮಾತ್ರ ರಾಷ್ಟ್ರದಲ್ಲಿ ಬದಲಾವಣೆ ತರಲು ಸಾಧ್ಯ ಎಂಬುದನ್ನು ಸಾರಿದ್ದರು, ಅಂಬೇಡ್ಕರ್ ಅವರ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು ” ಎಂದು ಹೇಳಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ” ಮಹಾರಾಷ್ಟ್ರ ರಾಜ್ಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಾಲೆಗೆ ಸೇರಿದ ದಿನ ನವೆಂಬರ್ 7 ರಂದು ವಿದ್ಯಾರ್ಥಿಗಳ ದಿನವನ್ನಾಗಿ ಆಚರಿಸುವುದು ವಿಶೇಷವಾಗಿದೆ. ಶಿಕ್ಷಣದಿಂದ ಮಾತ್ರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂಬುದನ್ನು ಮನಗಂಡು ಶಿಕ್ಷಣವನ್ನು ನಿರಂತರವಾಗಿ ಅಧ್ಯಯನ ಮಾಡಬೇಕು. ರಾಷ್ಟ್ರದಲ್ಲಿ ಇಂದಿಗೂ ಸಹ ಹಲವು ಸಮಸ್ಯೆಗಳನ್ನು ಬಗೆಹರಿಸಲು ಸಂವಿಧಾನವೇ ಆಶಯವಾಗಿದೆ. ಅಷ್ಟರ ಮಟ್ಟಿಗೆ ಸಂವಿಧಾನವನ್ನು ಬರೆದಿದ್ದಾರೆ ” ಎಂದರು.

Advertisements

ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕರಾದ ಡಾ.ಶಿವಕುಮಾರ್ ಅವರು ಮಾತನಾಡಿ ” ರಾಷ್ಟ್ರಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಸಾಕ್ಷರತೆ ಪ್ರಮಾಣವು ಶೇ.5.30 ರಷ್ಟು ಇತ್ತು, ಇಂದು ಶೇ.75 ರಷ್ಟು ಸಾಕ್ಷರತೆ ಪಡೆಯಲು ಸಂವಿಧಾನವೇ ಕಾರಣ. ಸ್ವಾತಂತ್ರ್ಯ ಪೂರ್ವದಲ್ಲಿ ಎಲ್ಲರೂ ಶಿಕ್ಷಣ ಪಡೆಯುವ ಅವಕಾಶ ಇರಲಿಲ್ಲ, ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಂತೆ ಶಿಕ್ಷಣ ಹಕ್ಕನ್ನು ನೀಡಿದರು. ಶಿಕ್ಷಣದ ಜೊತೆಗೆ ಉದ್ಯೋಗ ಆಯ್ಕೆಗೂ ಅವಕಾಶ ನೀಡಿದರು.

ರಾಷ್ಟ್ರದ ಪ್ರತಿ ಪ್ರಜೆಗೂ ಕಾನೂನು ಒಂದೇ ಎಂಬುದನ್ನು ಸಂವಿಧಾನದಲ್ಲಿ ಅಡಕಗೊಳಿಸಿದರು. ಇದರಿಂದಾಗಿ ಪ್ರತಿಯೊಬ್ಬ ನಾಗರಿಕರೂ ಸಂವಿಧಾನ ಗೌರವಿಸುವ ಮೂಲಕ ಭಾರತೀಯ ಕಾನೂನು ಆಳ್ವಿಕೆಗೆ ಒಳಪಡುವಂತೆ ಮಾಡಿದ್ದಾರೆ. ಹಿಂದೂ ಕೋಡ್ ಬಿಲ್ ಮಂಡಿಸುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿ, ಮಹಿಳೆಯ ವಿಮೋಚನೆಗೆ ಶ್ರಮಿಸಿದ್ದಾರೆ ” ಎಂದು ನುಡಿದರು.

ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ ” ಭಾರತದ ಪ್ರತಿ ಪ್ರಜೆಗೂ ಸಮಾನ ಅವಕಾಶ ಕಲ್ಪಿಸಲು ಪ್ರಯತ್ನಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸುವಂತಾಗಬೇಕು. ಚಿಂತನೆ, ದೂರದೃಷ್ಟಿ, ಪರಿಕಲ್ಪನೆ ಇಂದಿಗೂ ಸಹ ಮಾದರಿಯಾಗಿದೆ. ಅವರ ಆದರ್ಶ ಹಾಗೂ ವ್ಯಕ್ತಿತ್ವ ರೂಢಿಸಿಕೊಂಡಲ್ಲಿ ಯಶಸ್ಸು ಕಾಣಬಹುದು ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ ಅರಿವೇ ಅಂಬೇಡ್ಕರ್ ‘ ಸಂಚಿಕೆ ಬಿಡುಗಡೆ; ಓದಿನಲ್ಲಿ ಜೀವವಿದೆ, ಜೀವನವಿದೆ : ಲೇಖಕ ನಾ. ದಿವಾಕರ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಡಿಎಸ್ಎಸ್ ಜಿಲ್ಲಾ ಸಂಚಾಲಕ ದಿವಾಕರ, ದೌರ್ಜನ್ಯ ನಿವಾರಣೆ ಸಮಿತಿ ಸದಸ್ಯ ಜನಾರ್ಧನ, ನಗರಸಭೆ ಸದಸ್ಯ ಅನಿತಾ ಪೂವಯ್ಯ, ಸತೀಶ್, ಸಬಿತಾ, ಕಲಾವತಿ, ಟಿ.ಪಿ.ರಮೇಶ್, ಪ್ರೇಮ ಕೃಷ್ಣಪ್ಪ, ಮೋಹನ್ ಮೌರ್ಯ, ಪ್ರೇಮ್ ಕುಮಾರ್, ದೀಪಕ್ ಪೊನ್ನಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅರುಣ್ ಕುಮಾರ್, ಪಾಲಾಕ್ಷ, ವಿರೇಂದ್ರ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X