ಉಡುಪಿ | ಸಂವಿಧಾನ ಪಾಲನೆ ಡಾ. ಅಂಬೇಡ್ಕರ್‌ರವರಿಗೆ ನೀಡುವ ನಿಜವಾದ ಗೌರವ – ಪ್ರೊ. ಪ್ರಶಾಂತ ನೀಲಾವರ

Date:

Advertisements

ಸಂವಿಧಾನದ ಮೌಲ್ಯಗಳನ್ನು ಸರಿಯಾಗಿ ಅರಿತು ಅದನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ನೀಡುವ ನಿಜವಾದ ಗೌರವ. ಈ ದೃಷ್ಟಿಯಿಂದ ಸಂವಿಧಾನ ಅರಿವು ಕಾರ್ಯಕ್ರಮ ವ್ಯಾಪಕವಾಗಿ ನಡೆಯಬೇಕು ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ಪ್ರೊ. ಪ್ರಶಾಂತ ನೀಲಾವರ ಹೇಳಿದರು.

ಅವರು ಸೋಮವಾರ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಸಂಸ್ಥೆಯ ಸಭಾಭವನದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ, ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಪೂರ್ಣಪ್ರಜ್ಞ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಮತ್ತು ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು.

1005051220

ಕಾರ್ಯಕ್ರಮ ಉದ್ಘಾಟಿಸಿದ ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ಅಂಬೇಡ್ಕರ್ ಅವರ ವ್ಯಕ್ತಿತ್ವವನ್ನು ಅರ್ಥ ಮಾಡಿಕೊಂಡರೆ ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆ ಸಾಧ್ಯ ಎಂದರು.
ಜಿಲ್ಲಾ ರೆಡ್ ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಾ. ಜಿ. ಶಂಕರ್ ಸ.ಮ.ಪ್ರ. ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ ಪ್ರಸಾದ್, ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿ. ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಡಾ. ರಘು ನಾಯ್ಕ್ ಹಾಗೂ ನಾಗರಾಜ ಜಿ.ಪಿ, ರೆಡ್‌ಕ್ರಾಸ್ ಸಂಯೋಜಕ ಡಾ. ರಂಗಸ್ವಾಮಿ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ ನಿರೂಪಿಸಿದರೆ, ರೆಡ್‌ಕ್ರಾಸ್ ಖಚಾಂಚಿ ರಮಾದೇವಿ ವಂದಿಸಿದರು.

Advertisements

ಕಾರ್ಯಕ್ರಮಕ್ಕೂ ಮುನ್ನ ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಿಂದ ಶಾಂತಿ ಸೌಹಾರ್ದತಾ ಜಾಥಾಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ರೀಧರ ಪ್ರಸಾದ್ ಚಾಲನೆ ನೀಡಿದರು. ಕಾಲೇಜಿನಿಂದ ರೆಡ್‌ಕ್ರಾಸ್ ಭವನದವರೆಗೆ ಜಾಥಾ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X