ಬಿಹಾರ ವಿಧಾನಸಭೆ ಚುನಾವಣೆ | ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿಯಾದ ತೇಜಸ್ವಿ ಯಾದವ್

Date:

Advertisements

ಬಿಹಾರದಲ್ಲಿ ಈ ವರ್ಷದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿಯ ಹಿರಿಯ ನಾಯಕರುಗಳು ಮಂಗಳವಾರ ಸಭೆ ಸೇರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭೇಟಿಯಾಗಿದ್ದಾರೆ.

ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಜಂಟಿ ಕಾರ್ಯತಂತ್ರ ರೂಪಿಸಲು ಗುರುವಾರ ಪಾಟ್ನಾದಲ್ಲಿ ಸಿಪಿಐ(ಎಂಎಲ್‌) ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳು ಸಭೆ ನಡೆಯಲಿದೆ. ಅದಕ್ಕೂ ಮುನ್ನವೇ ತೇಜಸ್ವಿ ಯಾದವ್ ಕಾಂಗ್ರೆಸ್‌ನ ನಾಯಕರುಗಳನ್ನು ಭೇಟಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

Advertisements

ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಬಿಹಾರ ಉಸ್ತುವಾರಿ ಕೃಷ್ಣ ಅಲ್ಲಾವರು, ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ಕುಮಾರ್ ಮತ್ತು ಹಿರಿಯ ನಾಯಕ ಗುರುದೀಪ್ ಸಪ್ಪಲ್ ಹಾಗೂ ಆರ್‌ಜೆಡಿಯ ಮನೋಜ್ ಕೆ ಝಾ ಮತ್ತು ಸಂಜಯ್ ಝಾ ಅವರು ಭಾಗವಹಿಸಿದ್ದರು.

ಸಚಿನ್ ಪೈಲಟ್ ಸೇರಿದಂತೆ ಕಾಂಗ್ರೆಸ್ ನಾಯಕರು ಚುನಾವಣೆಯ ನಂತರ ಮೈತ್ರಿಕೂಟದ ಸಿಎಂ ಅಭ್ಯರ್ಥಿ ನಿರ್ಧರಿಸಲಾಗುವುದು ಎಂದು ಸಾರ್ವಜನಿಕವಾಗಿ ಹೇಳುತ್ತಿದ್ದಾರೆ. ಮೈತ್ರಿಕೂಟ ಚರ್ಚಿಸಿ ಸರ್ವಾನುಮತದಿಂದ ನಿರ್ಧಾರವನ್ನು ಕೈಗೊಳ್ಳುತ್ತದೆ. ಅದರ ಬಗ್ಗೆ ಯಾವುದೇ ಚಿಂತಿಸುವ ಅಗತ್ಯವಿಲ್ಲ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇನ್ನು ಏಪ್ರಿಲ್ 17ರಂದು ನಡೆಯುವ ಸಭೆಯಲ್ಲಿ ಮೈತ್ರಿಕೂಟದ ಪ್ರಚಾರ, ಸೀಟು ಹಂಚಿಕೆ, ಕಾರ್ಯತಂತ್ರ ಮೊದಲಾದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X