ಚೆನ್ನಾಗಿ ಪರೀಕ್ಷೆ ಬರೆದರೆ ವಿಮಾನಯಾನದ ಅವಕಾಶ; ಕೊಪ್ಪಳ ಶಿಕ್ಷಕರಿಂದ ವಿಶಿಷ್ಟ ಪ್ರಯೋಗ

Date:

Advertisements

ಕೊಪ್ಪಳದ ಮುಖ್ಯ ಶಿಕ್ಷಕರೊಬ್ಬರು ಮಕ್ಕಳಲ್ಲಿ ಓದುವ ಆಸಕ್ತಿ ಮೂಡಿಸಲು ವಿಶಿಷ್ಟ ಪ್ರಯೋಗವೊಂದನ್ನು ಮಾಡಿದ್ದಾರೆ. ಪ್ರತಿಭಾವಂತ ಮಕ್ಕಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಕಲ್ಪಿಸಿಕೊಡಲಿದ್ದಾರೆ.

ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಚಿಲವಾಡಗಿ ಇಂಥದ್ದೊಂದು ವಿಶೇಷ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ. 24 ವಿದ್ಯಾರ್ಥಿಗಳನ್ನು ಹೈದರಾಬಾದ್‌ಗೆ ವಿಮಾನದ ಮೂಲಕ ಕರೆದುಕೊಂಡು ಹೋಗಲಿದ್ದು, ಈ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು 5ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಲಿಖಿತ ಪರೀಕ್ಷೆ ನಡೆಸಿದ್ದಾರೆ.

ತಾಲೂಕಿನ ಹ್ಯಾಟಿ ಮುಂಡರಗಿ ಶಾಲೆಯ ಶಿಕ್ಷಕ ಕೆ ಎಂ ಅಲಿ ಸ್ವತಃ ಪ್ರಶ್ನೆಪತ್ರಿಕೆ ತಯಾರಿಸಿದ್ದಾರೆ. ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದ ಐದರಿಂದ ಎಂಟನೇ ತರಗತಿಯಲ್ಲಿನ ತಲಾ ಆರು ಜನ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಕರೆದುಕೊಂಡು ಹೋಗಲಾಗುತ್ತದೆ.

Advertisements

ಇದನ್ನೂ ಓದಿ: ಕೊಪ್ಪಳ | ʼಸದೃಢ ಭಾರತ ನಿರ್ಮಾಣಕ್ಕಾಗಿ ವ್ಯಕ್ತಿತ್ವ ವಿಕಸನ ಅಗತ್ಯʼ

‘ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಯಬೇಕು ಹಾಗೂ ಸ್ಪರ್ಧಾ ಮನೋಭಾವ ಮೂಡಬೇಕು ಎನ್ನುವ ಕಾರಣದಿಂದ ಲಿಖಿತ ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದವರನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗುವುದು’ ಎಂದು ಬೀರಪ್ಪ ಅಂಡಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X