ಉಡುಪಿ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು ಇದನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಖಂಡಿಸಿದೆ.
ಆಧುನಿಕತೆ ಹೆಚ್ಚಾಗುತ್ತಿದ್ದಂತೆ ಮನುಷ್ಯ ಮಾನವೀಯತೆಯನ್ನು ಮರೆಯುತ್ತಿರುವುದು ಅತ್ಯಂತ ವಿಷಾದದ ಸಂಗತಿ. ಇಂತಹದೇ ಘಟನೆ ಕಳೆದ ವಾರ ಪಕ್ಕದ ಜಿಲ್ಲೆಯಲ್ಲೂ ನಡೆದಿತ್ತು. ಮನುಷ್ಯ ತನ್ನ ಸ್ವಾರ್ಥಕ್ಕೋಸ್ಕರ ಯಾರ ಜೀವವನ್ನೂ ತೆಗೆಯಲು ಹೇಸದ ಮನಸ್ಥಿತಿ ನಿಜಕ್ಕೂ ಅತ್ಯಂತ ಶೋಚನೀಯ. ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಹಿಳಾ ಆಯೋಗ ಹಾಗೂ ಸಂಘಟನೆಗಳು ಇಂಥಹ ವಿಷಯಗಳ ಬಗ್ಗೆ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಬೇಕು ಹಾಗೂ ಜಿಲ್ಲಾಡಳಿತ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾಗಿರುವ ನಾಝಿಯ ನಸ್ರುಲ್ಲ ರವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.