ವಕ್ಫ್ ಮಸೂದೆ ವಿರೋಧಿಸಿ ಹಲವು ರಾಜ್ಯಗಳು, ವಿಪಕ್ಷಗಳು, ಪ್ರಗತಿಪರರು ಸುಪ್ರೀಂ ಕೋರ್ಟ್ ಕದ ತಟ್ಟುತ್ತಿದ್ದಾರೆ. ಈ ನಡುವೆ ಮಧ್ಯಪ್ರದೇಶ ಮತ್ತು ಅಸ್ಸಾಂ ಸೇರಿದಂತೆ ಆರು ಬಿಜೆಪಿ ಆಡಳಿತವಿರುವ ರಾಜ್ಯಗಳು ವಕ್ಫ್ ಕಾಯ್ದೆಯನ್ನು ಬೆಂಬಲಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಹೊಸ ವಕ್ಫ್ ಕಾನೂನಿನ ಸಾಂವಿಧಾನಿಕ ಸಿಂಧುತ್ವದ ವಿರುದ್ಧ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರ ಅರ್ಜಿ ಸೇರಿದಂತೆ ಹಲವು ಅರ್ಜಿಗಳನ್ನು ಮಧ್ಯಾಹ್ನ 2 ಗಂಟೆಗೆ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಇದನ್ನು ಓದಿದ್ದೀರಾ? ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ
ಈ ನಡುವೆ ಬಿಜೆಪಿ ಆಡಳಿತವಿರುವ ಆರು ರಾಜ್ಯಗಳಾದ ಹರಿಯಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಅಸ್ಸಾಂ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ರದ್ದುಗೊಳಿಸಿದರೆ ಅಥವಾ ಬದಲಾಯಿಸಿದರೆ ಆಡಳಿತಾತ್ಮಕ ಮತ್ತು ಕಾನೂನು ಪರಿಣಾಮಗಳು ಉಂಟಾಗಬಹುದು ಎಂದು ಪ್ರತ್ಯೇಕ ಅರ್ಜಿ ಸಲ್ಲಿಸಿವೆ.
ಈಗಾಗಲೇ ವಕ್ಫ್ ಮಸೂದೆ ವಿರುದ್ಧ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ. ಈ ವಿವಾದಾತ್ಮಕ ಅರ್ಜಿಯ ವಿರುದ್ಧವಾಗಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
