ಜಾತಿ ಗಣತಿ ಕುರಿತಾದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಬಗ್ಗೆ ಚರ್ಚಿಸಲು ಗುರುವಾರ ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಜಾತಿ ಗಣತಿ ಬಗ್ಗೆ ಕೂಲಂಕಶವಾಗಿ ಚರ್ಚೆ ಮಾಡಲಾಗುವುದು. ಇದು ಸಾಮಾಜಿಕ, ಆರ್ಥಿಕ ಸಮೀಕ್ಷೆಯಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದಾರಾಮಯ್ಯ ಹೇಳಿದ್ದಾರೆ.
ಉದ್ಯೋಗ ಮೇಳ ಉದ್ಘಾಟನೆಗಾಗಿ ಕಲಬುರಗಿಗೆ ಬಂದಿದ್ದ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದರು. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ನೀಡಿದ್ದ ‘ಜಾತಿ ಗಣತಿ ವಿಚಾರದಲ್ಲಿ ಲಿಂಗಾಯತ ಶಾಸಕರು ರಾಜಿನಾಮೆ ನೀಡಬೇಕು’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು. “ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗುರುವಾರ ಸಂಪುಟ ಸಭೆಯಲ್ಲಿ ಅಂತಿಮವಾಗಿ ತೀರ್ಮಾನ ಮಾಡಲಾಗುತ್ತದೆ” ಎಂದು ಹೇಳಿದರು.
ಉದ್ಯೋಗ ಮೇಳೆದ ಕುರಿತು ಮಾತನಾಡಿದ ಅವರು, “ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ” ಎಂದರು.
“ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಏರ್ಪಡಿಸಲಾಗಿದೆ. ಮೈಸೂರು, ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ” ಎಂದರು.
ದಾವಣಗೆರೆ ಮಹಿಳೆಗೆ ಥಳಿತ ಘಟನೆ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಆರೋಪಿಸಿ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ADD