ಹುಬ್ಬಳ್ಳಿ ಬಾಲಕಿ ಕೊಲೆ ಆರೋಪಿಯ ಶವ ಅನಾಥ; ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು

Date:

Advertisements

ನಗರದ ಹೊರವಲಯದಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್‌ಕೌಂಟರ್​ನಲ್ಲಿ ಮೃತಪಟ್ಟ ಹಂತಕ ರಿತೇಶಕುಮಾರ (35) ಫೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ.

ಹುಬ್ಬಳ್ಳಿಯ ಕೆಎಂಸಿಆರ್​​ಐ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿರುವ ರಿತೇಶಕುಮಾರ ಶವವನ್ನು ಗುರುತಿಸಲು ಆತನ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಂದಿಲ್ಲ. ಹೀಗಾಗಿ, ಪೊಲೀಸರು ಫೋಟೋ ಸಹಿತ ಪ್ರಕಟಣೆ ಹೊರಡಿಸಿದ್ದಾರೆ.

ಆರೋಪಿಯು ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ. ಅಲ್ಲದೇ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ‘ಓಂ ನಮಃ ಶಿವಾಯ ಜಯ ಸಂಜಯ’ ಎಂಬ ಟ್ಯಾಟೂ ಸಹ ಇದೆ. ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? IPL 2025: ಬ್ಯಾಟರ್‌ಗಳು ಅಳತೆ ಮೀರಿದ ಬ್ಯಾಟ್ ಬಳಸುತ್ತಿದ್ದಾರೆಯೇ? ಅಂಪೈರ್‌ಗಳು ಪರಿಶೀಲಿಸುವುದೇಕೆ?

ಆರೋಪಿ ರಿತೇಶ ಪೊಲೀಸ್ ವಿಚಾರಣೆ ವೇಳೆ ತಾನು ಬಿಹಾರದ ಪಾಟ್ನಾ ನಿವಾಸಿ ಎಂದು ಹೇಳಿದ್ದ. ಆದರೆ ಇಲ್ಲಿಯವರೆಗೂ ಆತನ ಮನೆಯವರಿಗೆ ಸುದ್ದಿ ತಲುಪಿಸಲು ಆಗಿಲ್ಲ. ಕುಟುಂಬಸ್ಥರನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈತನ ಫೋಟೋ ಮತ್ತು ಕೃತ್ಯದ ಬಗ್ಗೆ ಬಿಹಾರ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೂ ಮಾಹಿತಿ ರವಾನೆ ಮಾಡಲಾಗಿದೆ. ಅಲ್ಲಿಂದ ಏನಾದರೂ ಸುದ್ದಿ ಬರಬಹುದು ಎಂದು ಹುಬ್ಬಳ್ಳಿ ಪೊಲೀಸರು ಕಾಯುತ್ತಿದ್ದಾರೆ.

ಇದರ ಮಧ್ಯೆ ಪೊಲೀಸರ ಮತ್ತೊಂದು ತಂಡ ಬಿಹಾರದ ಪಾಟ್ನಾಗೆ ತೆರಳಿ ಆರೋಪಿಯ ವಿಳಾಸ ಪತ್ತೆ ನಡೆಸುತ್ತಿದೆ. ಇಲ್ಲಿಯೂ ಕೂಡ ಅಶೋಕನಗರ ಠಾಣೆ ಪೊಲೀಸರು ಆರೋಪಿ ಸ್ನೇಹಿತರು, ಪರಿಚಯಸ್ಥರನ್ನು ಗುರುತಿಸಿ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕುವ ಕೆಲಸ ಮಾಡಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X