ಬೆಂಗಳೂರು | ಹಾಡಹಗಲೇ ವಿದ್ಯಾರ್ಥಿ ಮೇಲೆ ಹಲ್ಲೆ: 7 ಆರೋಪಿಗಳ ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ವಿದ್ಯಾರ್ಥಿ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ.

ಸತ್ಯ, ಜೀವನ್, ಅಭಿಷೇಕ್, ರವಿಕುಮಾರ್, ಚಂದನ, ಗೌತಮ್ ಗೌಡ ಹಾಗೂ ಸೂರ್ಯ ಬಂಧಿತ ಆರೋಪಿಗಳು.

ಕಳೆದ ಜೂನ್ 5 ರಂದು ನಾಗರಬಾವಿಯ ಖಾಸಗಿ ಕಾಲೇಜು ವಿದ್ಯಾರ್ಥಿ ದರ್ಶನ್ ಎಂಬುವವರು ಕಾಲೇಜು ಮುಂದೆ ತಮ್ಮ ಸ್ನೇಹಿತರೊಂದಿಗೆ ನಿಂತಿದ್ದರು. ಈ ವೇಳೆ, ಬೈಕ್‌ನಲ್ಲಿ ಬಂದ ಯುವಕರು ದರ್ಶನ್ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿದ್ದರು. ಅನ್ನಪೂರ್ಣೆಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisements

21 ವರ್ಷದ ದರ್ಶನ್ ಬಿಬಿಎ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಹಲ್ಲೆ ಮಾಡಿದ ದೃಶ್ಯಾವಳಿಗಳು ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿತ್ತು. ಸಿಸಿಟಿವಿ ವಿಡಿಯೊ ಆಧರಿಸಿ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಂದೇ ಭಾರತ್ ರೈಲಿನಲ್ಲಿ 5 ಕಿ.ಮೀ ಪ್ರಯಾಣಕ್ಕೆ 410 ರೂ.

ಪೊಲೀಸರು ಪ್ರಾಥಮಿಕ ತನಿಖೆ ವೇಳೆ ಆರೋಪಿಗಳು ನಗರದಲ್ಲಿ ಹವಾ ಮೆಂಟೇನ್ ಮಾಡಲು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X