ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಮಾಸಿಕ ₹15,000 ಗೌರವಧನ ಹೆಚ್ಚಿಸಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಧಾರವಾಡ ಜಿಲ್ಲೆಯ ಕುಂದಗೋಳ ಸಿಡಿಪಿಒ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.
ಎಐಟಿಯುಸಿ ಯೂನಿಯನ್ ತಾಲೂಕು ಅಧ್ಯಕ್ಷೆ ಶಿವಲೀಲಾ ನಡೂರಮಠ ಮಾತನಾಡಿ, “ಸರ್ಕಾರ ಘೊಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಗೌರವಧನ ಹೆಚ್ಚಳ ಮಾಡಬೇಕು. ನಿವೃತ್ತ ಕಾರ್ಯಕರ್ತೆಯರಿಗೆ, ಸಹಾಯಕರಿಯರಿಗೆ ನಿವೃತ್ತಿ ವೇತನವನ್ನೂ ಹೆಚ್ಚಿಗೆ ಮಾಡಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಜಿಲ್ಲಾಸ್ಪತ್ರೆಯಲ್ಲಿ ಸರ್ವರ್ ಸಮಸ್ಯೆ; ಹೊರರೋಗಿಗಳ ಆಕ್ರೋಶ
ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗಳ ಭರ್ತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಸಮೀಕ್ಷೆಗಾಗಿ ನೀಡಿರುವ ಮೊಬೈಲ್‌ಗಳು ಹಾಳಾಗಿರುವ ಪರಿಣಾಮ ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಕೂಡಲೇ ಹೊಸ ಮೊಬೈಲ್ ಪೋನ್ ನೀಡಬೇಕು” ಎಂದು ಒತ್ತಾಯಿಸಿದರು.