ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ನಾಳೆ ಮಳೆ ಪ್ರಮಾಣ ಕಡಿಮೆಯಾದರೂ ಕೂಡಾ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
ಮುಂದಿನ ಆರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿದ್ದೀರಾ? ಕರ್ನಾಟಕದಲ್ಲಿ ಡಿಸೆಂಬರ್ 20ರಿಂದ ಭಾರೀ ಮಳೆ: ಹವಾಮಾನ ಇಲಾಖೆ
ಫೆಬ್ರವರಿ 19ರಿಂದ ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಲ್ಲಿ ಹಗುರ ಮಳೆಯಾಗುವ
ಸಾಧ್ಯತೆಯಿದೆ.
ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳ್ಲಲಿ ಗಂಟೆಗೆ 40-50 ಕಿ.ಮೀ. ಗಾಳಿಯೊಂದಿಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಗಾಳಿ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
