ನಗರದ ಪ್ರಮುಖ ರಸ್ತೆಗೆ ಅಂಬೇಡ್ಕರ್ ನಾಮಫಲಕ ಅಳವಡಿಸಲು ಜಿಲ್ಲಾಡಳಿತ ಮತ್ತು ನಗರ ಸಭೆ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತ ಹಾಗೂ ಸಪ್ತಗಿರಿ ಎಲೆಕ್ಟ್ರಿಕಲ್ ಬಳಿ ಡಾ. ಬಿ. ಆರ್. ಅಂಬೇಡ್ಕರ್ ಜೋಡಿ ರಸ್ತೆ ನಾಮಫಲಕ ಅಳವಡಿಸಿ ಅನಾವರಣ ಮಾಡುವ ಮೂಲಕ ನಗರ ಸಭೆಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
1976 ರಲ್ಲಿ ಮಂಡ್ಯ ನಗರಸಭೆಯಲ್ಲಿ ಅಂಬೇಡ್ಕರ್ ವೃತ್ತದಿಂದ ಬೆಸಗರಹಳ್ಳಿ ರಾಮಣ್ಣ ವೃತದ ವರೆಗೆ ಅಂಬೇಡ್ಕರ್ ಜೋಡಿ ರಸ್ತೆ ಎಂದು ನಾಮಕರಣ ಮಾಡುವ ನಿರ್ಣಯ ಮಾಡಿತ್ತು. ಅದರಂತೆ ರಸ್ತೆಯ ಎರಡು ಬದಿಯಲ್ಲಿ ಅಂಬೇಡ್ಕರ್ ರಸ್ತೆ ನಾಮಫಲಕ ಅಳವಡಿಸಿದ್ದರು.
ಈ ಸಂದರ್ಭದಲ್ಲಿ ಸ್ವಾಭಿಮಾನಿ ಸಮ ಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ ವಿ ಕೃಷ್ಣ, ನಾವು ದ್ರಾವಿಡ ಕನ್ನಡಿಗರು ಸಂಘಟನೆಯ ಅಭಿ ಒಕ್ಕಲಿಗ, ಬುದ್ಧ ಭಾರತ ಫೌಂಡೇಶನ್‌ನ ಜೆ. ರಾಮಯ್ಯ, ಪರಿವರ್ತನಾ ಸಂಸ್ಥೆಯ ಟಿ.ಡಿ ನಾಗರಾಜ್, ಸಮಾನ ಮನಸ್ಕರ ವೇದಿಕೆಯ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ, ದಲಿತ ಸಂಘರ್ಷ ಸಮಿತಿಯ ಅಂದಾನಿ ಸೋಮನಹಳ್ಳಿ, ಹಾಲಹಳ್ಳಿ ಮುಕುಂದ, ಪ್ರದೀಪ್ ಸೇರಿದಂತೆ ಹಲವರು ಇದ್ದರು.