ಬಳ್ಳಾರಿ | ಶ್ರೀಧರಗಡ್ಡೆ ಗ್ರಾಮದ ನಿವೇಶನರಹಿತರಿಗೆ ನಿವೇಶನ ಹಂಚಿಕೆಗೆ ಎಸ್‌ಯುಸಿಐಸಿ ಆಗ್ರಹ

Date:

Advertisements

ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಎಸ್‌ಯುಸಿಐಸಿಯಿಂದ ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜಾಸಾಬ್ ಅವರಿಗೆ ಮನವಿ ಸಲ್ಲಿಸಿದರು.

ಎಸ್‌ಯುಸಿಐನ ಸದಸ್ಯ ಪ್ರಮೋದ ಮಾತನಾಡಿ, “ಸುಮಾರು 25 ವರ್ಷಗಳಿಂದ ಹೋರಾಟ ನಡೆಸುತ್ತಲೇ ಬಂದಿದ್ದೆವೆ. ಪಟ್ಟಿ ಸಿದ್ಧವಿದ್ದರೂ ಕೂಡ ಈವರೆಗೂ ಯಾವುದೇ ಬೆಳವಣಿಗೆ ಆಗಿಲ್ಲ. ಸರ್ಕಾರಿ ಜಮೀನಿನಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಇರುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ಜನರಿಗೆ ನಿವೇಶನ ಹಂಚಿಕೆ ಮಾಡಬೇಕು. ಈ ಹಿಂದೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ”‌ ಎಂದು ಆರೋಪಿಸಿದರು.

“ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸಮಸ್ಯೆ ಪರಿಹಾರವಾಗಬೇಕು. ಆದ್ದರಿಂದ ಶೀಘ್ರದಲ್ಲಿ ನಿವೇಶನಗಳನ್ನು ಫಲಾನುಭವಿಗಳಿಗೆ ಹಂಚಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ಮಾತುಗಳನ್ನಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಬಿ ಆರ್ ಗವಾಯಿಯವರ ವಿಶೇಷತೆಗಳೇನು?

ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಹಾಗೂ ಸದಸ್ಯರು “ಈ ಕುರಿತು ತುರ್ತು ಸಭೆ ಕರೆದು ಚರ್ಚಿಸಿ ಬಡವರಿಗೆ ಸಿಗಬೇಕಾದ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಎಸ್‌ಯುಸಿಐಸಿ(SUCIC) ಗ್ರಾಮೀಣ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಎ ದೇವದಾಸ್, ಸದಸ್ಯರಾದ ಈ ಹನುಮಂತಪ್ಪ, ಜಗದೀಶ್ ನೇಮಕಲ್, ಫಲಾನುಭವಿ ಬಸಮ್ಮ, ಆಯೇಷಾ ಬೇಗಂ, ನಾಗಮ್ಮ, ಗೌರಮ್ಮ, ಗೌಸಿಯ ಬೇಗಂ, ಊರಿನ ಮುಖಂಡರಾದ ಹನುಮಂತಪ್ಪ, ದೊಡ್ಡಬಸಪ್ಪ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X