ಬೆಂಗಳೂರು | ಪೂರ್ಣಚಂದ್ರ ಕನ್ನಡ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸ್ಥಾಪನೆ; ಏ.27ರಂದು ಉದ್ಘಾಟನೆ

Date:

Advertisements

ಕನ್ನಡದ ಸಂವೇದನಾಶೀಲ ಬರಹಗಾರ, ಚಿಂತಕರಾದ ಕೆ ಪಿ ಪೂರ್ಣಚಂದ್ರ ತೇಜಸ್ವಿಯವರ ನೆನಪಿಗಾಗಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆಯಲ್ಲಿರುವ ‘ಶ್ರೀ ರಾಮಕೃಷ್ಣ ಸಮಗ್ರ ಶಿಕ್ಷಣ ಕೇಂದ್ರ’ದ ಆವರಣದಲ್ಲಿ ‘ಪೂರ್ಣಚಂದ್ರ ಕನ್ನಡ ಸಾಂಸ್ಕೃತಿಕ ಅಧ್ಯಯನ ಕೇಂದ್ರ’ವನ್ನು ಸ್ಥಾಪಿಸಲಾಗಿದೆ ಎಂದು ನಿರ್ದೇಶಕ ಡಾ. ಕೆ ಸಿ ಶಿವಾರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿದ್ದು, “ಸಾಹಿತ್ಯ, ವಿಮರ್ಶೆ, ಅನುವಾದ, ವಿಜ್ಞಾನ, ತಂತ್ರಜ್ಞಾನ, ಪರಿಸರ, ಫೋಟೋಗ್ರಫಿ, ಕ್ಯಾಲಿಗ್ರಫಿ ಇವು ತೇಜಸ್ವಿಯವರ ಆಸಕ್ತಿಯ ಕ್ಷೇತ್ರಗಳಾಗಿದ್ದವು. ಈ ಹಿನ್ನಲೆಯಲ್ಲಿ ಚರ್ಚೆ, ಸಂವಾದ, ಸಂಶೋಧನೆ, ಕಮ್ಮಟ, ವಿಚಾರ ಸಂಕಿರಣಗಳನ್ನು ಈ ಕೇಂದ್ರದಲ್ಲಿ ವರ್ಷಪೂರ್ತಿ ಹಮ್ಮಿಕೊಳ್ಳಲಾಗುತ್ತದೆ. ಹಾಗೆಯೇ ಉನ್ನತ ಸಂಶೋಧನೆಗಳಿಗೂ ಇಲ್ಲಿ ಅವಕಾಶವಿದೆ” ಎಂದು ಹೇಳಿದ್ದಾರೆ.

“ಎಲ್ಲ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ನೀಡಲು ಏಪ್ರಿಲ್‌ 27, 28ರಂದು ಸಂಧ್ಯಾಸ್ಪತಿ ಮಂದಿರದಲ್ಲಿ ‘ಪೂರ್ಣಚಂದ್ರ ಕನ್ನಡ ಸಾಂಸ್ಕೃತಿಕ ಅಧ್ಯಯನ ಕೇಂದ್ರ’ದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಹಾಗೆಯೇ ತೇಜಸ್ವಿಯವರ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಲಾಗುತ್ತಿದೆ. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದೊಂದಿಗೆ ಈ ಕೇಂದ್ರದ ಉದ್ಘಾಟನೆಯ ಪ್ರಯುಕ್ತ ನಡೆಯಲಿರುವ ಅಧ್ಯಯನ ಶಿಬಿರವನ್ನು ಆಯೋಜಿಸಲಾಗಿದೆ. ಅಂದು ಎರಡು ದಿನಗಳ ಕಾಲ ಉದ್ಘಾಟನಾ ಸಮಾರಂಭದ ಜತೆಗೆ ತೇಜಸ್ವಿಯವರ ಆಸಕ್ತಿಯ ಕ್ಷೇತ್ರಗಳಿಗೆ ಸಂಬಂಧಿಸಿದ ಚರ್ಚೆ, ಸಂವಾದಗಳನ್ನೊಳಗೊಂಡ ಅಧ್ಯಯನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಇದರ ಜತೆಗೆ ಕವಿಗೋಷ್ಠಿ, ನಾಟಕ ಪ್ರದರ್ಶನ ಮತ್ತು ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ಕೂಡ ನಡೆಯಲಿವೆ” ಎಂದರು.

“ಈ ಸಮಾರಂಭದಲ್ಲಿ ನಾಡಿನ ಸಾಂಸ್ಕೃತಿಕ ಲೋಕದ ಚಿಂತಕರು, ಸಂವೇದನಾಶೀಲ ಯುವ ಬರಹಗಾರರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಾಡಿನ ಸಾಹಿತ್ಯಾಸಕ್ತರು ಭಾಗವಹಿಸಲು ಅವಕಾಶವಿದೆ. ತೇಜಸ್ವಿಯವರ ಆಸಕ್ತಿಯ ಕ್ಷೇತ್ರಗಳನ್ನು ಕುರಿತು ಆ ಎರಡೂ ದಿನ ಪ್ರಬಂಧ ಮಂಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಪ್ರಬಂಧ ಮಂಡಿಸಲು ಆಸಕ್ತಿ ಇರುವವರು 9448900999 ಈ ವಾಟ್ಸ್ಯಾಪ್ ಸಂಖ್ಯೆಗೆ ತಮ್ಮ ವಿಷಯಕ್ಕೆ ಸಂಬಂಧಿಸಿದ ಸಾರಲೇಖವನ್ನು 10 ದಿನಗಳ ಒಳಗೆ ಕಳುಹಿಸಿಕೊಡಬೇಕು” ಎಂದು ತಿಳಿಸಿದ್ದಾರೆ.‌

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಕ್ಷಣೆ ನೀಡುವ ಗೃಹರಕ್ಷಕ ಸಿಬ್ಬಂದಿಗಳಿಗೆ ಉತ್ತಮ ಕಚೇರಿಯ ರಕ್ಷಣೆಯಿಲ್ಲ; ಗಮನಿಸುವರೇ ಅಧಿಕಾರಿಗಳು?

“ನೋಂದಣಿ ಮಾಡಿಸಿದವರಿಗೆ ಮಾತ್ರ ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ನೀಡಲಾಗುವುದು. ಅಗತ್ಯವಿದ್ದವರಿಗೆ OOD ಸೌಲಭ್ಯ ಒದಗಿಸಲಾಗುವುದು. ಸಾಹಿತ್ಯಾಸಕ್ತರು ಸಾರ್ವಜನಿಕರು ಭಾಗವಹಿಸಲು ಮುಕ್ತವಾದ ಅವಕಾಶವಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X