7302 ವಿದ್ಯಾರ್ಥಿಗಳ ಪೈಕಿ 5275 ಹಾಜರಿ, 1752 ವಿದ್ಯಾರ್ಥಿಗಳು ಗೈರು
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಏ.16, 17ರಂದು ಎರಡು ದಿನಗಳ ಕಾಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಡೆದ ಯು.ಜಿ-ಸಿಇಟಿ ಪರೀಕ್ಷೆಯು ಜಿಲ್ಲಾದ್ಯಂತ ಸುಸೂತ್ರವಾಗಿ ನೆರವೇರಿತು.
ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳಿಲ್ಲದೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆದಿದ್ದು, ಸದರಿ ಪರೀಕ್ಷೆಗೆ ಒಟ್ಟು 7302 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 5275 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಮೊದಲ ದಿನ 572, ಎರಡನೇ ದಿನ 1230 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲಾಡಳಿತ ವತಿಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕಣ್ಗಾವಲು ಮತ್ತು ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಜತೆಗೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಕುಡಿಯುವ ನೀರು, ಶೌಚಾಲಯ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ಏ.26ರಂದು ರಾಜ್ಯಮಟ್ಟದ ಸಂವಿಧಾನ ಸಂರಕ್ಷಕರ ಸಮಾವೇಶ
ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಡೆದ ಯು.ಜಿ-ಸಿಇಟಿ ಪರೀಕ್ಷೆಯು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಇಲ್ಲದಂತೆ ವೆಬ್ ಕ್ಯಾಸ್ಟಿಂಗ್ ಸಾಕ್ಷಿಯಲ್ಲಿ ಯಶಸ್ವಿಯಾಗಿ ಮುಗಿದಿದೆ. ಪರೀಕ್ಷಾ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ, ಪ್ರಾಂಶುಪಾಲರಿಗೆ, ಕೊಠಡಿ ಮೇಲ್ವಿಚಾರಕರು, ಜಾಗೃತ ದಳದ ಸದಸ್ಯರಿಗೆ, ಪೊಲೀಸ್, ಗೃಹರಕ್ಷಕ ದಳದ ಸಿಬ್ಬಂದಿಗೆ ಜಿಲ್ಲಾಡಳಿತದ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.