ಶಿವಮೊಗ್ಗ | ತೀರ್ಥಹಳ್ಳಿ ಮಂಗನ ಖಾಯಿಲೆಗೆ ಬಾಲಕ ಸಾವು

Date:

Advertisements

ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ.ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬ ತಿಳಿಸಿದೆ.

ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸಹೋದರಿಗೆ ಮೊದಲು ಕೆಎಫ್ ಡಿ ಪಾಸಿಟಿವ್ ಬಂದಿದೆ.

1001488982

ಆದರೆ ರಜತ್ ಗೆ ನಾರ್ಮಲ್ ಎಂದು ಬಂದಿತ್ತು. ನಂತರ ಪಾಸಿಟಿವ್ ಬಂದಿದೆ. ಎಂದು ಕುಟುಂಬ ತಿಳಿಸಿದೆನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚೇತರಿಸಿಕೊಂಡ ಸಹೋದರಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ರಚಿತ್ ಚಿಕಿತ್ಸೆ ಫಲಿಸದೆ ತಡರಾತ್ರಿ 8:30ರ ವೇಳೆಗೆ ಆಸ್ಪತ್ರೆಯಲ್ಲಿ ಸಾವನ್ನಪಿದ್ದಾರೆ.

Advertisements

ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಚಿದೆ.ಇಬ್ಬರೂ ಶಾಲೆಗೆ ಹೀಗಿ ಬರುತ್ತಿದ್ದರೆ ಬಿಟ್ಟರೆ ಕಾಡಿಗೆ ಹೋಗಿರುವ ಬಗ್ಗೆ ಹಿಸ್ಟರಿಯಿಲ್ಲ ಎನ್ನುತ್ತದೆ ಕುಟುಂಬ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಹೆಚ್ ಒ ರಜತ್ ಸಾವು ಕೆಎಫ್ ಡಿಯಿಂದ ಎಂಬುದಕ್ಕೆ ಪುಣೆಯಿಂದ ವರದಿ ಬರಬೇಕಿದೆ ಎಂದಿದ್ದಾರೆ. ಅಲ್ಲಿಯವರೆಗೂ ಇದು ಕೆಎಫ್ ಡಿ ಶಂಕಿತ ಎಂದು ಪ್ರತಿಕ್ರಿಯಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕೊನೇರಿಪುರ ಗ್ರಾಮದ 54 ವರ್ಷದ ಮಹಿಳೆ ಕೆಎಫ್‌ಡಿ ಸೋಂಕಿನಿಂದ ಕಳೆದ ಫೆಬ್ರವರಿ ತಿಂಗಳಲ್ಲಿ ಸಾವನ್ನಪ್ಪಿದ್ದರು,

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X