ಶಿವಮೊಗ್ಗ | ಓಮಿನಿ ಅಡ್ಡಗಟ್ಟಿ ದರೋಡೆ ಆರೋಪಿಗಳ ಬಂಧನ

Date:

Advertisements

ಕಳೆದ ತಿಂಗಳು ದಿನಾಂಕ:25-03-2025 ರಂದು ಕಾರ್ತಿಕ್ ಎನ್ನುವ 22 ವರ್ಷ ವಯಸ್ಸಿನ ಆರ್.ಎಂ.ಎಲ್ ನಗರದ ನಿವಾಸಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಿನಕೊಪ್ಪ ಕ್ರಾಸ್ ಹತ್ತಿರ ಓಮಿನಿ ಕಾರನ್ನು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ, ಬೆಳಗಿನ ಜಾವ ಸುಮಾರು 06:35 ಗಂಟೆ ಸಮಯದಲ್ಲಿ 4 ಜನ ಅಪರಿಚಿತರು 2 ಮೋಟಾರು ಬೈಕುಗಳಲ್ಲಿ ಕಾರನ್ನು ಆಡ್ಡ ಹಾಕಿ ತಡೆದು 3,50,000/- ರೂ ಬೆಲೆ ಬಾಳುವ ಸುಮಾರು 900 ಕೆ.ಜಿ. ತೂಕದ ಹಿತ್ತಾಳೆ ಮತ್ತು ತಾಮ್ರದ ಗುಜರಿ ವಸ್ತುಗಳನ್ನು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.

1001488928

ಈ ಪ್ರಕರಣ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0060/2025 ಕಲಂ 309 (6) ಬಿ.ಎನ್.ಎಸ್ ಕಾಯ್ದೆ ರೀತ್ಯಾ ದಾಖಲಾಗಿರುತ್ತದೆ. .ಪ್ರಕರಣದಲ್ಲಿ ಮಾಲು ಹಾಗೂ ಆರೋಪಿತರ ಪತ್ತೆ ಬಗ್ಗೆ, ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ. ಕೆ. ಅನಿಲ್ ಕುಮಾರ್ ಭುಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಹಾಗೂ ಎ. ಜಿ. ಕಾರ್ಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ನಾಗರಾಜ ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಜಗದೀಶ್ ಹಂಚಿನಾಳ್, ಪಿ ಐ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ಶ್ರೀಶೈಲಕೆಂಚಣ್ಣವರ, ಪಿಎಸ್ಐ ಮತ್ತು ಎ.ಎಸ್.ಐ. ಚಂದ್ರಶೇಖರ್, ದಿವಾಕರ್ ರಾವ್ ಮತ್ತು ಸಿಬ್ಬಂಧಿಗಳಾದ ಹೆಚ್.ಸಿ ಮಂಜುನಾಥ, ಸಿ.ಪಿ.ಸಿ ಈರಯ್ಯ, ರೇವಣ ಸಿದ್ದಪ್ಪ, ವಿಜಯ್ ಕುಮಾರ್ ಹಾಗೂ ಸಂತೋಷ ಕುಮಾರ ರವರನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ಪ್ರಕರಣದ ಆರೋಪಿತರಾದ ಕವಿರಾಜ, 21 ವರ್ಷ, ಭೋವಿ ಕಾಲೋನಿ ಹೊಸಮನೆ ಭದ್ರಾವತಿ , ಮುಬಾರಕ್, 24 ವರ್ಷ, ಮೇಲಿನ ತುಂಗಾನಗರ ಶಿವಮೊಗ್ಗ, ಅಜಿತ್ @ ಘಟ್ಟ, 19 ವರ್ಷ ಬಾರಂದೂರು, ಭದ್ರಾವತಿ ಮಂಜುನಾಥ @ ಮಂಜು, 21 ವರ್ಷ, ಕಬಳಿಕಟ್ಟೆ ಗ್ರಾಮ, ಭದ್ರಾವತಿ, ಇವರನ್ನು ದಸ್ತಗಿರಿ ಮಾಡಿ ಸದರಿ ಆರೋಪಿತರಿಂದ ಅಂದಾಜು ಮೌಲ್ಯ 3,50,000/- ರೂಗಳ ಕಳ್ಳತನ ಮಾಡಿದ 700 ಕೆ.ಜಿ ತೂಕದ ಹಿತ್ತಾಳೆ ಮತ್ತು ತಾಮ್ರದ ಗುಜರಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ಮೌಲ್ಯ 3,00,000/- ರೂಗಳ TATA ACE ವಾಹನ ಮತ್ತು ಅಂದಾಜು ಮೌಲ್ಯ 85,000/- ರೂಗಳ ಪಲ್ಸರ್ ಬೈಕ್ ಸೇರಿ ಒಟ್ಟು ಮೌಲ್ಯ, 7,35,000 ರೂ ಗಳ ಮಾಲನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.

Advertisements

ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್, ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X