ಶಿವಮೊಗ್ಗ ನಗರದ ಪ್ರಸಿದ್ಧ ಕೋಟೆ ಶ್ರೀಸೀತರಾಮಾಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರಾದ ಹೊ.ನ.ಅನಂತರಾಮ ಅಯ್ಯಂಗಾರ್ ಇಂದು ಬೆಳಗಿನ ಜಾವ 3 ಗಂಟೆ ವೇಳೆ ದೈವಾಧೀನರಾಗಿದ್ದಾರೆ.

ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ಅನಂತ ರಾಮ ಅಯ್ಯಂಗಾರ್ ಪತ್ನಿ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅನಂತರಾಮ ಅಯ್ಯಂಗಾರ್ ರವರ ಪಾರ್ಥೀವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಕೋಟೆ ಶ್ರೀಸೀತಾ ರಾಮಾಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿರುವ ಅವರ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಇಂದು ಮಧ್ಯಾಹ್ನ 2.30ರಿಂದ 3ಗಂಟೆಗೆ ಅಂತಿಮ ಸಂಸ್ಕಾರದ ವಿಧಿ ವಿಧಾನಗಳು ರೋಟರಿ ಚಿತಗಾರದಲ್ಲಿ ನೆರವೇರಲಿದೆ.