ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕಿನ ಎಲೆ ಬಿಚ್ಚಾಲಿಯ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮುತ್ತು ರಾಜ( 23) , ಮಧನ್ (20) ನೀರಿನಲ್ಲಿ ಕೊಚ್ಚಿಕೊಂಡು ಮೃತಪಟ್ಟಿರುವ ಯುವಕರು ಎಂದು ಗುರುತಿಸಲಾಗಿದೆ.ಬೆಂಗಳೂರು ನಗರದ ದೇವನಹಳ್ಳಿಯ ಗ್ರಾಮದವರು ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು: ಭೀಕರ ಅಪಘಾತದಲ್ಲಿ ನಾಲ್ವರ ಸಾವು
ಮಂತ್ರಾಲಯ ಪ್ರವಾಸಕ್ಕೆಂದು ದೇವನಹಳ್ಳಿಯ ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರ ತಂಡ ತೆರಳಿದ್ದರು.ರಾಯರ ದರ್ಶನ ಪಡೆದು ಯುವಕರು ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮಂತ್ರಾಲಯ ಸೇರಿ ಸುತ್ತಮುತ್ತ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಲು ಪ್ರವಾಸಕ್ಕೆಂದು ಬಂದಿದ್ದರು.
