ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ತುಮಕೂರು ಎಫ್‌ಟಿಎಸ್‌ಸಿ-1 ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿ ಆದೇಶಿಸಿದೆ.
2023ರ ನವೆಂಬರ್ 11ರಂದು ನೊಂದ ಬಾಲಕಿಯ ತಾಯಿ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಐಪಿಸಿ ಮತ್ತು ಕಲಂ 06 ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಮಹಿಳಾ ಪೊಲೀಸ್ ಠಾಣಾಧಿಕಾರಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಬೇಕು: ಭಾರತೀಯ ಕಿಸಾನ್ ಸಂಘ
ಪ್ರಕರಣದ ವಿಚಾರಣೆ ಕೈಗೊಂಡ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ₹3 ಲಕ್ಷ ದಂಡ ವಿಧಿಸಿದ್ದಾರೆ. ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕಿ ಆಶಾ ಕೆ ಎಸ್ ವಾದ ಮಂಡಿಸಿದ್ದರು.