ಬಸವಕಲ್ಯಾಣ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ರುದ್ರಮಣಿ ಮಠಪತಿ ನೇಮಕ 

Date:

Advertisements

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಬಸವಕಲ್ಯಾಣ ತಾಲ್ಲೂಕು ಕಸಾಪ ಅಧ್ಯಕ್ಷರನ್ನಾಗಿ ಡಾ.ರುದ್ರಮಣಿ ಮಠಪತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.

ʼಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಶಾಂತಲಿಂಗ ಮಠಪತಿ ಅವರು  ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿರುತ್ತಾರೆ. ಶಾಂತಲಿಂಗ ಮಠಪತಿ ಅವರಿಂದ ತೆರವಾದ ಸ್ಥಾನಕ್ಕೆ ಉಳಿದ ಅವಧಿಗೆ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ರುದ್ರಮಣಿ ಮಠಪತಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಕಳೆದ ಮೂರು ವರುಷಗಳಲ್ಲಿ ಶಾಂತಲಿಂಗ ಮಠಪತಿ ಅವರು ಕ್ರಿಯಾಶೀಲವಾಗಿ ಅನೇಕ ಕಾರ‍್ಯಕ್ರಮಗಳನ್ನು ಸಂಘಟಿಸಿದ್ದಾರೆ. ಮುಖ್ಯವಾಗಿ ದಾನಿಗಳಾದ ಮಲ್ಲಿಕಾರ್ಜುನ ಕುರಕೊಟೆ ಅವರು ಕಸಾಪಕ್ಕೆ ನೀಡಿರುವ ನಿವೇಶನವನ್ನು ನಗರಸಭೆಯಿಂದ ಸಾಹಿತ್ಯ ಪರಿಷತ್ತಿಗೆ ವರ್ಗಾಯಿಸಿರುತ್ತಾರೆ. ಜೊತೆಗೆ  ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಪ್ರತಿಯೊಂದು ಶಾಲಾ-ಕಾಲೇಜಿನ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಿರುವ ಕಾರ್ಯ ಶ್ಲಾಘನೀಯʼ ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

ಡಾ.ರುದ್ರಮಣಿ ಮಠಪತಿ ಅವರು ಸುಮಾರು ದಶಕಗಳಿಂದ ಸಾಂಸ್ಕೃತಿಕ ಸಂಘಟಕರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಈ ಹಿಂದೆ ಬಸವಕಲ್ಯಾಣ ತಾಲ್ಲೂಕಿನ ಕಸಾಪ ಅಧ್ಯಕ್ಷರಾಗಿ ಹೊಸ ನಿವೇಶನ ಹಾಗೂ ಎರಡು ತಾಲ್ಲೂಕು ಸಮ್ಮೇಳನ, ಯುವ ಸಮ್ಮೇಳನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ನಾಡು ನುಡಿಯ ನಿಷ್ಠ ಸೇವಕರಾಗಿ ಅನೇಕ ಸಂಘ ಸಂಸ್ಥೆಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ರುದ್ರಮಣಿ ಮಠಪತಿ ಅವರನ್ನು ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು ಅವರು ಹುದ್ದೆಯನ್ನು ಸ್ವೀಕರಿಸಿ ಕಾರ್ಯಪ್ರವೃತ್ತರಾಗಲು ಕಸಾಪ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X