ಮದುವೆಗೆ ಹೆಣ್ಣು ಸಿಗದ ಕಾರಣ ಮನನೊಂದ ಯುವಕ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.
ಯಲ್ಲಾಪುರದ ನಿವಾಸಿ ನಾಗರಾಜ್ ಗಣಪತಿ ಗಾಂವ್ಕರ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದೆ.
ನಾಗರಾಜ್ ಅವರು ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಎಲ್ಲರಂತೆಯೇ ತಾನು ಮದುವೆಯಾಗಬೇಕೆಂದು ಕನಸು ಕಟ್ಟಿಕೊಂಡಿದ್ದರು. ಅಂತೆಯೇ ಹಲವು ದಿನಗಳಿಂದ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಹತ್ತಿರದ ಸಂಬಂಧಿಕರ ಬಳಿ ವಧು ಹುಡುಕಲು ಕೇಳಿದ್ದರು. ಆದರೆ, ವಧು ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಇಬ್ಬರು ಯುವಕರಿಂದ ಬ್ಲ್ಯಾಕ್ ಮೇಲ್ ; ಯುವತಿ ಆತ್ಮಹತ್ಯೆ
“ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂದು ನಿತ್ಯ ಚಿಂತೆಗೆ ಜಾರಿದ್ದ ನಾಗರಾಜ್ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಆ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾರೆ. ತನ್ನ ಮನೆಯ ಸಮೀಪದ ಗುಡ್ಡಕ್ಕೆ ತೆರಳಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.
ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.