ವಿಫಲ ಸಂಬಂಧಗಳಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ: ಅಲಹಾಬಾದ್ ಹೈಕೋರ್ಟ್

Date:

Advertisements

ವಿಫಲ ಸಂಬಂಧಗಳಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಅರುಣ್ ಕುಮಾರ್ ಮಿಶ್ರಾ ಎಂಬವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಕ್ರಿಶನ್ ಪಹಲ್ ಅವರ ಪೀಠವು ಈ ಹೇಳಿಕೆ ನೀಡಿದೆ.

ಅರ್ಜಿದಾರರು ಮೂರು ಬಾರಿ ವಿವಾಹವಾಗಿದ್ದಾರೆ ಎಂಬ ಬಗ್ಗೆ ಮೊದಲೇ ಮಾಹಿತಿಯಿದ್ದರೂ ಮಹಿಳೆ ಆತನೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿಕೊಂಡ ಅಲಹಾಬಾದ್ ಹೈಕೋರ್ಟ್ 25 ವರ್ಷದ ಮಹಿಳೆ ಅತ್ಯಾಚಾರ ಆರೋಪ ಮಾಡಿರುವ 42 ವರ್ಷದ ವಿವಾಹಿತ ವ್ಯಕ್ತಿ ಮಿಶ್ರಾಗೆ ಜಾಮೀನು ನೀಡಿದೆ.

ಇದನ್ನು ಓದಿದ್ದೀರಾ? ಹಿಂದೂಗಳ ವಿವಾಹ ‘ಪವಿತ್ರವಾದುದ್ದು’ ವರ್ಷದಲ್ಲೇ ರದ್ದುಗೊಳಿಸಲಾಗದು: ಅಲಹಾಬಾದ್ ಹೈಕೋರ್ಟ್

Advertisements

ಅರ್ಜಿದಾರರ ಪರ ವಕೀಲರು ಎಫ್‌ಐಆರ್ ಆರು ತಿಂಗಳು ವಿಳಂಬವಾಗಿದೆ. ಸಂತ್ರಸ್ತರು ಅರ್ಜಿದಾರರೊಂದಿಗೆ ಒಮ್ಮತದ ಸಂಬಂಧ ಹೊಂದಿದ್ದರು ಎಂದು ವಾದಿಸಿದ್ದಾರೆ. ಮತ್ತೊಂದೆಡೆ ಸಂತ್ರಸ್ತರ ಪರ ವಕೀಲರು ಅರ್ಜಿದಾರರು ಈಗಾಗಲೇ ಮೂವರು ಮಹಿಳೆಯರನ್ನು ಮದುವೆಯಾಗಿದ್ದಾರೆ. ಬೇರೆ ಬೇರೆ ಮಹಿಳೆಯರನ್ನು ಪುಸಲಾಯಿಸಿ, ಆಕರ್ಷಿಸಿ ಲೈಂಗಿಕ ಸಂಪರ್ಕ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಈ ಪ್ರಕರಣದಲ್ಲಿಯೂ ಮಹಿಳೆಯರ ಮೇಲೆ ಅಲಹಾಬಾದ್ ಹೈಕೋರ್ಟ್ ಬೊಟ್ಟು ಮಾಡಿರುವಂತಿದೆ. ಹಾಗೆಯೇ ಪವಿತ್ರತೆ, ಸಂಸ್ಕೃತಿ ಎಂಬ ಅನವಶ್ಯಕ ಮಾತುಗಳನ್ನು ಹೈಕೋರ್ಟ್ ಉಲ್ಲೇಖಿಸಿದೆ. “ಈ ಪ್ರಕರಣವು ವಿಶಾಲವಾದ ಸಾಮಾಜಿಕ ಬದಲಾವಣೆಯ ಪ್ರತಿಬಿಂಬವಾಗಿದೆ. ಆತ್ಮೀಯ ಸಂಬಂಧದಲ್ಲಿ ಪವಿತ್ರತೆ ಮತ್ತು ಗಾಂಭೀರ್ಯವು ಕುಸಿತ ಕಂಡಿದೆ” ಎಂದು ಹೇಳಿಕೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X