ರಾಯಚೂರು | ಸಂವಿಧಾನ ಜಾಗೃತಿ ಜಾಥಾಕ್ಕೆ ಅಭೂತಪೂರ್ವ ಸ್ವಾಗತ

Date:

Advertisements

ಪ್ರತಿಯೊಬ್ಬ ನಾಗರಿಕರು ದೇಶದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂವಿಧಾನ ಯುವಯಾನದ ಮುಖಂಡ ಸರೋವರ ಬೆಂಕಿಕೆರೆ ಹೇಳಿದರು.

ʼದೇಶಪ್ರೇಮಿ ಯುವಾಂದೋಲನʼ ಸಂಘಟನೆಯಿಂದ ರಾಜ್ಯಾದ್ಯಂತ ಏಪ್ರಿಲ್ 14 ರಿಂದ 26ರವೆಗೆ ಹಮ್ಮಿಕೊಂಡಿರುವ ʼಸಂವಿಧಾನ ಯುವಯಾನʼ ಬೈಕ್‌ ಜಾಥಾ ಗುರುವಾರ ರಾಯಚೂರು ನಗರಕ್ಕೆ ತಲುಪಿತು. ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

WhatsApp Image 2025 04 18 at 9.53.44 PM

‘ಸಂವಿಧಾನವು ಸಮಾನತೆ, ಭ್ರಾತೃತ್ವ, ರಾಷ್ಟ್ರೀಯ ಏಕತೆ ತರುವಲ್ಲಿ ತನ್ನದೇ ಆದ ಪಾತ್ರವಹಿಸಿದೆ. ಸಂವಿಧಾನದ ಮಹತ್ವವನ್ನು ಮನೆ-ಮನೆಗೆ ತಲುಪಿಸುವ ಪ್ರಯತ್ನವನ್ನು ಸಂವಿಧಾನಯಾನ ಜಾಗೃತಿ ಜಾಥಾ ಮೂಲಕ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾವು ಅತ್ಯಂತ ಅರ್ಥಪೂರ್ಣವಾಗಿ ಯಶಸ್ವಿಯಾಗಿದೆ ಎಂದರು.

Advertisements

ಜಾಥಾವು ಬುಧವಾರ ಸಂಜೆ ಯಾದಗಿರಿ ಜಿಲ್ಲೆ ಶಹಾಪೂರ ತಾಲ್ಲೂಕು ಮೂಲಕ ಬೈಕ್ ಜಾಥಾ ದೇವದುರ್ಗ ಪಟ್ಟಣಕ್ಕೆ ಆಗಮಿಸಿ ರಾಯಚೂರು , ಮಾನ್ವಿ , ಪೋತ್ನಾಳ, ಸಿಂಧನೂರು ಹಾಗೂ ತುರುವಿಹಾಳ ಮೂಲಕ ರಾಯಚೂರು ಜಿಲ್ಲೆಗೆ ತಲುಪಿದೆ.

ಸಂವಿಧಾನಯಾನ ಜಾಥಾಕ್ಕೆ ಅಭೂತಪೂರ್ವ ಸ್ವಾಗತ ದೊರೆತ್ತಿದ್ದು, ಸ್ಥಳೀಯ ಹೋರಾಟಗಾರರು, ಯುವಕರು ಹಾಗೂ ಸಂವಿಧಾನ ಹಿತೈಷಿಗಳು ಜಿಲ್ಲೆಯ ಪ್ರತಿಯೊಂದು ಸ್ಥಳಗಳಲ್ಲಿ ನಮ್ಮನ್ನು ಬರಮಾಡಿಕೊಂಡರು. ರಾತ್ರಿ 7 ಗಂಟೆ ಸುಮಾರು ತುರುವಿಹಾಳ ಪಟ್ಟಣಕ್ಕೆ ಆಗಮಿಸಿದಾಗ ನೂರಾರು ಯುವಕರು ಬೈಕ್ ಗಳನ್ನು ಸಿದ್ಧತೆ ಮೂಲಕ ಸಿದ್ದರಾಗಿ ‘ಜೈ ಭೀಮ್, ಜೈ ಸಂವಿಧಾನ’ ಘೋಷಣೆಗಳು ಮೊಳಗಿದವು.

WhatsApp Image 2025 04 18 at 9.53.21 PM

ಸಂವಿಧಾನ ಯುವಯಾನ ತಂಡಕ್ಕೆ ದೇವದುರ್ಗ ಶಾಸಕಿ ಪುತ್ರಿ ಗೌರಿ ಕರೆಮ್ಮ ಅವರು ಸಂವಿಧಾನ ಪೀಠಿಕೆ ನೀಡುವ ಮೂಲಕ ಸ್ವಾಗತಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಇಬ್ಬರ ಸಾವು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ರಾಯಚೂರು ನಗರದಿಂದ ಚುರುಕು ಬಿಸಿಲಿನಲ್ಲಿ ಮಾನ್ವಿ ಕಡೆಗೆ ಜಾಥಾ ಮುಂದುವರೆಯಿತು. ಬೈಕ್‌ಗಳಿಗೆ ನೀಲಿ ಧ್ವಜ ಹಾಗೂ ತ್ರಿವರ್ಣ ಧ್ವಜಗಳನ್ನು ಕಟ್ಟಿಕೊಂಡು ಹೊರಡುವ ಮಾರ್ಗ ಮಧ್ಯೆ ವಾಹನ ಸವಾರರು ಜಾಥಾ ತಂಡದವರಿಗೆ ತಂಪು ಪಾನೀಯ ಕುಡಿಸಿದರು. ಯುವಯಾನಕ್ಕೆ ಅಪಾರ ಸಂಖ್ಯೆಯ ಜನರು ಬೆಂಬಲಿಸಿ ಪಾಲ್ಗೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X