ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದ ಎಸ್‌ಎಫ್‌ಎಸ್‌ ಕಂಪನಿ

Date:

Advertisements

ಆ್ಯಪಲ್‌ ಫೋನ್‌ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿ ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ.

ಇದಕ್ಕಾಗಿ ಎಸ್‌ಎಫ್‌ಎಸ್‌ ಕಂಪನಿ 30 ಎಕರೆ ಭೂಮಿಯನ್ನು ಒದಗಿಸುವಂತೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್‌ ಅವರ ಮುಂದೆ ಮನವಿ ಇಟ್ಟಿದೆ.

ಈ ಸಂಗತಿಯನ್ನು ಎಂ ಬಿ ಪಾಟೀಲ್‌ ಅವರು ಟ್ವೀಟ್‌ ಮೂಲಕ ಹಂಚಿಕೊಂಡಿದ್ದು, “ಮನವಿ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ” ಭರವಸೆ ನೀಡಿದ್ದಾರೆ. ಎಸ್‌ಎಫ್‌ಎಸ್‌ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಫಾರಸ್‌ ಶಾ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಸಚಿವರ ಬಳಿ ಚರ್ಚಿಸಿದೆ.

Advertisements

500 ತಂತ್ರಜ್ಞರಿಗೆ ಉದ್ಯೋಗ

“ಎಸ್‌ಎಫ್‌ಎಸ್‌ ಕಂಪನಿ ಈಗಾಗಲೇ ಬೆಳಗಾವಿಯಲ್ಲಿ ಏರೋಸ್ಪೇಸ್‌ ಉದ್ಯಮಕ್ಕೆ ಬೇಕಾಗುವ ಬಿಡಿಭಾಗಗಳನ್ನು ತಯಾರಿಸುತ್ತಿದೆ. ಈಗ ಅದು ಆ್ಯಪಲ್‌ ಫೋನ್‌ಗೆ ಬೇಕಾಗುವ ಬಿಡಿಭಾಗಗಳ ತಯಾರಿಕ ಘಟಕವನ್ನು ರಾಜ್ಯದಲ್ಲಿ ತೆರೆಯಲು ಮುಂದಾಗಿದೆ. ಇದರಿಂದ ಮುಂದಿನ ಮೂರು ವರ್ಷಗಳಲ್ಲಿ 500 ತಂತ್ರಜ್ಞರಿಗೆ ಉದ್ಯೋಗ ಸಿಗಲಿದೆ. ಇದರ ಜತೆಗೆ ಪರೋಕ್ಷವಾಗಿ ನೂರಾರು ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಿಂದ ರಾಜ್ಯದ ಆರ್ಥಿಕತೆಗೂ ಅನುಕೂಲವಾಗಲಿದೆ” ಎಂದು ಎಂ ಬಿ ಪಾಟೀಲ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X