ಮೈಸೂರು ತಾಲ್ಲೂಕು ವಾಜಮಂಗಲದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹಾಗೂ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ.
ದಿನಾಂಕ -18/04/2024 ರ ಶುಕ್ರವಾರ ಬ್ಯಾನರ್ ಹರಿದು,ಸಿದ್ದಾರ್ಥ ಯುವಕ ಮಂಡಲದ ನಾಮಫಲಕ ವಿರೂಪಗೊಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸಚಿವ ಸಂಪುಟ ಸಭೆ : ಮೈಸೂರು ಪ್ರಾದೇಶಿಕ ಆಯುಕ್ತರಿಂದ ಸಿದ್ದತಾ ಸಭೆ

ದಲಿತ ಸಂಘಟನೆಗಳು, ಮುಖಂಡರು ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ,ಕಾನೂನು ರೀತ್ಯಾ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
