ಪದವೀಧರ ಯುವಕ-ಯುವತಿಯರಿಗೆ ರಾಜಕೀಯ ತರಬೇತಿ ನೀಡುತ್ತೇವೆ: ಸಭಾಧ್ಯಕ್ಷ ಯು ಟಿ ಖಾದರ್‌

Date:

Advertisements
  • ‘ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆಗೂ ಚರ್ಚಿಸಿದ್ದೇನೆ’
  • ಸೂಕ್ತ ಸ್ಥಳದಲ್ಲಿ ಸಂಸ್ಥೆಯನ್ನು ಆರಂಭಿಸುತ್ತೇವೆ: ಯು ಟಿ ಖಾದರ್‌

ಪದವೀಧರ ಯುವಕ ಮತ್ತು ಯುವತಿಯರಿಗೆ ಒಂದು ವರ್ಷದ ರಾಜಕೀಯ ತರಬೇತಿ ನೀಡುವ ಸಂಸ್ಥೆಯನ್ನು ಸ್ಥಾಪಿಸುವ ಪ್ರಸ್ತಾಪ ಇದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿ, “ಇಂತಹ ಪ್ರಸ್ತಾವ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಪುಣೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಇಂತಹ ತರಬೇತಿ ನೀಡುತ್ತಿದೆ. ಬೇರೆಲ್ಲೂ ರಾಜಕೀಯ ತರಬೇತಿ ನೀಡುವ ಸಂಸ್ಥೆ ಇಲ್ಲ. ನಮ್ಮಲ್ಲೂ ಇದು ಆರಂಭವಾಗಬೇಕು” ಎಂದರು.

“ರಾಜಕೀಯ ತರಬೇತಿ ಸಂಸ್ಥೆ ಆರಂಭಿಸುವ ಕುರಿತು ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆಗೂ ಚರ್ಚಿಸಿದ್ದೇನೆ. ಸೂಕ್ತ ಸ್ಥಳದಲ್ಲಿ ಸಂಸ್ಥೆಯನ್ನು ಆರಂಭಿಸುತ್ತೇವೆ. ಇದಕ್ಕೆ ಪ್ರಾಂಶುಪಾಲರು ಮತ್ತು ಬೋಧಕ ಸಿಬ್ಬಂದಿ ಇರುತ್ತಾರೆ” ಎಂದರು.

Advertisements

“ಆರು ತಿಂಗಳ ತರಬೇತಿ ಹಾಗೂ ಪ್ರಾಯೋಗಿಕ ಅನುಭವಕ್ಕಾಗಿ ಆರು ತಿಂಗಳ ಇಂಟರ್ನ್ ಷಿಪ್‌ಗೆ ಅವಕಾಶ ಕಲ್ಪಿಸುತ್ತೇವೆ. ಶಾಸಕರು, ಸಚಿವರು, ನನ್ನ ಕಚೇರಿಯೂ ಸೇರಿ ವಿವಿಧ ಸರ್ಕಾರಿ ಕಚೇರಿಗಳಲ್ಲೂ ಇಂಟರ್ನ ಷಿಪ್ ಮಾಡಲು ಅವಕಾಶ ನೀಡಬಹುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನತಂತ್ರವೆಂಬುದು ಭಾರತದ ವಂಶವಾಹಿಯಲ್ಲಿದೆಯೇ ಮೋದಿಯವರೇ, ಹೌದೇ?

“ಮುತ್ಸದ್ದಿ ರಾಜಕಾರಣಿಗಳು, ಐಎಎಸ್ ಅಧಿಕಾರಿಗಳ ಜೊತೆಗೂ ಆಗಾಗ ಸಂವಾದ ಏರ್ಪಡಿಸಿ, ವಿದ್ಯಾರ್ಥಿಗಳು ಅವರ ಅನುಭವದ ಪ್ರಯೋಜನ ಪಡೆಯಲು ಅವಕಾಶ ಕಲ್ಪಿಸುತ್ತೇವೆ. ಇನ್ನಷ್ಟು ಸಮಾಲೋಚನೆ ನಡೆಸಿ ಸಂಸ್ಥೆಯನ್ನು ಕಾರ್ಯರೂಪಕ್ಕೆ ತರುತ್ತೇವೆ” ಎಂದರು.

“ಇದಕ್ಕಾಗಿ ಪುಣೆಯ ಸಂಸ್ಥೆಯ ನೆರವು ಪಡೆದು ಪಠ್ಯಕ್ರಮವನ್ನು ಶೀಘ್ರವೇ ರೂಪಿಸಲಾಗುತ್ತದೆ. ಭವಿಷ್ಯದಲ್ಲಿ ಉತ್ತಮ ರಾಜಕಾರಣಿಗಳನ್ನು ರೂಪಿಸಲು ಈ ಸಂಸ್ಥೆ ನೆರವಾಗಬೇಕು ಎಂಬ ಆಶಯ ನಮ್ಮದು” ಎಂದು ವಿವರಿಸಿದರು.

ಜುಲೈ 3ರಿಂದ ಅಧಿವೇಶನ

“ಜುಲೈ 3ರಿಂದ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಅಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಜಂಟಿ ಸದನ ಉದ್ದೇಶಿಸಿ ಮಾತನಾಡುತ್ತಾರೆ. ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಲಿದ್ದಾರೆ” ಎಂದು ಇದೇ ವೇಳೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X