ಜಾತಿ ಗಣತಿ ವರದಿ ವೈಜ್ಞಾನಿಕ ದತ್ತಾಂಶ ಹೊಂದಿದೆ, ನಾನು ಓದಿದ್ದೇನೆ: ಗೃಹ ಸಚಿವ ಪರಮೇಶ್ವರ್‌

Date:

Advertisements

ಜಾತಿ ಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ. ವರದಿ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಸಚಿವರಿಗೆ ಹೇಳಿದ್ದಾರೆ. ಚರ್ಚೆ ಮುಂದುವರಿದಿದ್ದು ಅವರವರ ಅಭಿಪ್ರಾಯ ತಿಳಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಸರ್ಕಾರ ಅಂತಿಮ ತೀರ್ಮಾನ ತಗೆದುಕೊಳ್ಳಲಿದೆ ಗೃಹ ಸಚಿವ ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಇದು ಒಬ್ಬರ ತೀರ್ಮಾನ ಅಗುವುದಿಲ್ಲ. ಕ್ಯಾಬಿನೆಟ್ ತೀರ್ಮಾನ ಅಗುತ್ತದೆ‌. ಇದು ಮುಖ್ಯಮಂತ್ರಿಯೊಬ್ಬರ ತೀರ್ಮಾನವೂ ಅಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಪ್ರತಿ ಪಕ್ಷಗಳ ಟೀಕೆಗಳನ್ನು ಗಮನಿಸಿದ್ದೇವೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಿರುವುದು ಯಾವ ಸಮುದಾಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಅಧ್ಯಯನ‌ ಮಾಡಿ ಸರ್ಕಾರಕ್ಕೆ ತಿಳಿಸುವುದು. ಸ್ವಾಭಾವಿಕವಾಗಿ ಯಾವ ಸಮುದಾಯ ಎಷ್ಟೆಷ್ಟು ಜನಸಂಖ್ಯೆ ಇದೆ ಎಂಬ ಅಂಕಿ-ಅಂಶಗಳನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆ‌. ಅದರ ಮೇಲೆ ಚರ್ಚೆಯಾಗುತ್ತಿದೆ. ಅಂತಿಮವಾಗಿ ಸರ್ಕಾರ ಒಪ್ಪಬೇಕು. ಮುಂದೆ ಯೋಜನೆಗಳನ್ನು ಮಾಡಬೇಕು” ಎಂದು ಅಭಿಪ್ರಾಯಪಟ್ಟರು.

Advertisements

“ಕೆಲ ಸಮುದಾಯದವರು ತಮ್ಮ ಆತಂಕವನ್ನು ವ್ಯಕ್ತ ಮಾಡಿದ್ದಾರೆ. ವರದಿಯನ್ನು ನಾನು ಓದಿದ್ದೇನೆ. ವೈಜ್ಞಾನಿಕ ದತ್ತಾಂಶವನ್ನು ಹೊಂದಿರುವ ವರದಿ‌ಯಾಗಿದೆ. ಒಂದು ಕುಟುಂಬದಲ್ಲಿ ಬೋರ್‌ವೆಲ್ ಹಾಕಿಸಿದ್ದರೆ, ಅದರಲ್ಲಿ ನೀರು ಬಂದಿದೆಯೇ? ನೀರು ಬಂದಿಲ್ಲವೇ? ನೀರು ಸಿಕ್ಕಿಲ್ಲವೇ? ಎಂಬ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಸಮೀಕ್ಷೆ ವೇಳೆ ಮನೆಗೆ ಹೋದಾಗ ಮನೆಯವರಿಂದ ಸಹಿ ಮಾಡಿಸಿಕೊಂಡಿದ್ದಾರೆ. ಇದರ ಮೇಲುಸ್ತುವಾರಿಗಳು ಸಹಿ ಹಾಕಿರುವ ಡೇಟಾ ನಮ್ಮ ಬಳಿ ಇದೆ‌. ಈ ಎಲ್ಲ ಡೇಟಾ ವರದಿಯಲ್ಲಿದೆ. 1.37 ಲಕ್ಷ ಕುಟುಂಬಗಳ ಮನೆಗೆ ಭೇಟಿ ಕೊಟ್ಟಿದ್ದಾರೆ‌. ಅಷ್ಟು ಡೇಟಾ ಇದೆ. ಇದನ್ನೆಲ್ಲ ಮರದ ಕೆಳಗೆ ಕುಳಿತು ಬರೆದುಕೊಂಡು ಬರಲು ಆಗುವುದಿಲ್ಲ‌” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಬ್ಬಳ್ಳಿ, ಮಂಗಳೂರು ಅತ್ಯಾಚಾರ ಪ್ರಕರಣ; ಪೊಲೀಸ್‌ ಇಲಾಖೆ ಎಚ್ಚೆತ್ತುಕೊಳ್ಳಬೇಕು

“ಒಳ ಮೀಸಲಾತಿ ಹಂಚಿಕೆಗೆ ಈ ಡೇಟಾವನ್ನು ಬಳಸಲು ಪರಿಶೀಲನೆ ಮಾಡುತ್ತಾರೆ. ಈಗಾಗಲೇ ಜಸ್ಟೀಸ್ ನಾಗಮೋಹನ್ ದಾಸ್ ಅವರಿಗೆ ಡೇಟಾ ಸಂಗ್ರಹಿಸಲು ಆದೇಶ‌ ಮಾಡಲಾಗಿದೆ. ಆ ಡೇಟಾವನ್ನು ಇದರೊಂದಿಗೆ ಜಾತಿಗಣತಿ ವರದಿಯೊಂದಿಗೆ ಹೋಲಿಕೆ ಮಾಡುತ್ತಾರೆ. ಜಾತಿಗಣತಿ ವರದಿ ಬಿಡುಗಡೆಯಾಗುವ ಮೊದಲೇ ಡೇಟಾ ಸಂಗ್ರಹಿಸಲು ಆದೇಶ ಮಾಡಿದ್ದೇವೆ. ಈಗ ವಾಪಸ್ ಪಡೆಯಲು ಆಗುವುದಿಲ್ಲ” ಎಂದು ತಿಳಿಸಿದರು.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೇನೆ. ಗಾಯಾಳುವನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ” ಎಂದರು.

ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲ ಪ್ರಕರಣಗಳು ಕಡಿಮೆಯಾಗಿವೆ‌.‌ಸೈಬರ್ ಪ್ರಕರಣಗಳು ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದರೆ ಯಾವ ಆಧಾರದ ಮೇಲೆ ಹೇಳುವುದು. ಈ ಬಗ್ಗೆ ಆರೋಪ ಮಾಡುವವರು ಸ್ವಲ್ಪ ಯೋಚಿಸಿ ಮಾತನಾಡಬೇಕು‌” ಎಂದು ಎಚ್ಚರಿಸಿದರು.

“ಸಿಇಟಿ ಪರೀಕ್ಷೆ ವೇಳೆ ಜಾನಿವಾರ ತೆಗೆಸಿರುವುದು ಬಹಳ ದೊಡ್ಡ ತಪ್ಪು. ನಾನು ಕೂಡ ಅದನ್ನು ಒಪ್ಪುವುದಿಲ್ಲ‌.‌ ಪರೀಕ್ಷೆ ವೇಳೆ ಕೈಗೊಳ್ಳಬೇಕಾದ ಕೆಲವು ನಿಯಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿರುತ್ತದೆ‌‌. ಇದನ್ನೆಲ್ಲ ಹೇಳಿರುವುದಿಲ್ಲ. ಯಾರೋ ಒಬ್ಬ ಮಾಡಿರುವುದು ಇಡೀ ಸಮಾಜಕ್ಕೆ ಸರಿ ಕಾಣುತ್ತಿಲ್ಲ” ಎಂದು ಖಂಡಿಸಿದರು.

“ಎತ್ತಿನಹೊಳೆ ಯೋಜನೆಯ ಕೆರೆ ತುಂವಬಿಸುವ ಕೆಲಸಕ್ಕೆ ಇಂದು ಶಂಕುಸ್ಥಾಪನೆ ಮಾಡಲಾಗುತ್ತಿದೆ. 288 ಕೋಟಿ ರೂ. ಖರ್ಚು ಮಾಡಿ 62 ಕೆರೆಗಳನ್ನು ತುಂಬಿಸಲು ಶಂಕುಸ್ಥಾಪನೆ ಮಾಡಲಾಗುತ್ತಿದೆ. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಚಿವ ರಾಜಣ್ಣ, ಕೇಂದ್ರ ಅಚಿವ ವಿ.ಸೋಮಣ್ಣ ಹಾಗೂ ಸ್ಥಳೀಯ ಶಾಸಕರು ಆಗಮಿಸಲಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X