ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ಜುಲೈನಿಂದ ದ್ವಿಚಕ್ರ ವಾಹನ, ಆಟೋ ಸಂಚಾರ ನಿಷೇಧ!

Date:

Advertisements
  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾದ ನಂತರ ಪ್ರಯಾಣದ ಅವಧಿ ಕಡಿಮೆ
  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿಯ ವೇಗ ಗಂಟೆಗೆ 120 ಕಿ.ಮೀ ನಿಗದಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆಗೊಂಡ ಬಳಿಕ ಒಂದಿಲ್ಲೊಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿದೆ. ಕಳೆದ ಅಕ್ಟೋಬರ್‌ನಿಂದ ಇಲ್ಲಿಯವರೆಗೂ 150ಕ್ಕೂ ಹೆಚ್ಚು ಜನ ಈ ಎಕ್ಸ್‌ಪ್ರೆಸ್‌ ವೇನಲ್ಲಿ ಪ್ರಯಾಣಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ, ಜುಲೈ 15ರಿಂದ ಈ ಹೈವೆಯಲ್ಲಿ ದ್ವಿಚಕ್ರ ವಾಹನ, ಆಟೋ ರೀಕ್ಷಾ, ಸೈಕಲ್, ಟ್ರ್ಯಾಕ್ಟರ್ ವಾಹನ ಪ್ರವೇಶಕ್ಕೆ ನಿರ್ಭಂಧ ಹೇರಲಾಗುತ್ತಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾದ ನಂತರ ಪ್ರಯಾಣದ ಅವಧಿ ಕಡಿಮೆಯಾಗಿದೆ. ಆದರೆ, ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಮಾಡಿದರು. ಕಳೆದ ಅಕ್ಟೋಬರ್‌ನಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಮುಕ್ತ ಪ್ರವೇಶ ನೀಡಲಾಗಿತ್ತು.

ಬೆಂಗಳೂರಿನಿಂದ 119 ಕೀ.ಮೀ ದೂರ ಇರುವ ಮೈಸೂರಿಗೆ ತಲುಪಲು ಈ ಎಕ್ಸ್‌ಪ್ರೆಸ್‌ ವೇನಲ್ಲಿ ಕೇವಲ 90 ನಿಮಿಷ ಸಮಯ ಹಿಡಿಯುತ್ತದೆ. ಅತಿ ವೇಗ ವಾಹನ ಚಾಲನೆ, ರಸ್ತೆ ನಿಯಮ ಉಲ್ಲಂಘನೆ, ವಿರುದ್ಧ ದಿಕ್ಕಿನಿಂದ ಸಂಚಾರ ಸೇರಿದಂತೆ ಹಲವು ಕಾರಣಗಳಿಂದ ಎಕ್ಸ್‌ಪ್ರೆಸ್‌ ವೇ ನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ.

Advertisements

“ಜುಲೈ 15ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಗೆ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳು ಹಾಗೂ ಸೈಕಲ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ಮುಂದಿನ 10-15 ದಿನಗಳಲ್ಲಿ ಈ ಬಗ್ಗೆ ಅಧಿಕೃತ ಅಧಿಸೂಚನೆ ಬರಲಿದೆ. ಅದಕ್ಕಾಗಿ ಕಾಯುತ್ತಿದ್ದೇವೆ” ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೇತನ ಬಾಕಿ | ಜು. 8ರಿಂದ ಸಾಮೂಹಿಕ ರಜೆಗೆ ನಿರ್ಧರಿಸಿದ 108 ಆ್ಯಂಬುಲೆನ್ಸ್​ ಸಿಬ್ಬಂದಿ

“ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿಯ ವೇಗ ಗಂಟೆಗೆ 120 ಕಿ.ಮೀ ನಿಗದಿ ಮಾಡಲಾಗಿದೆ. ಬೈಕ್‌ಗಳನ್ನು ಅನುಮತಿಸುವ ಯೋಜನೆ ಇತ್ತು. ಆದರೆ, ಹೆಚ್ಚಿನವರು ಲೇನ್ ಶಿಸ್ತನ್ನು ಅನುಸರಿಸುವುದಿಲ್ಲ ಹಾಗೂ ಬೈಕ್‌ 120 ಕಿ.ಮೀ ವೇಗದಲ್ಲಿ ಸಂಚರಿಸುತ್ತವೆ. ಇದರಿಂದ ಸಂಚಾರ ಅಪಾಯ ತಂದೊಡ್ಡಲಿವೆ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಅವುಗಳನ್ನು ಸಹ ನಿಷೇಧಿಸಲಾಗುವುದು” ಎಂದು ಹೇಳಿದ್ದಾರೆ.

“ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲಾಗುವುದು. ಎಲ್ಲ ಪ್ರಕ್ರಿಯೆಗಳು 10-15 ದಿನಗಳ ಅವಧಿಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸೂಚನೆ ಬಂದ ನಂತರ ನಿಷೇಧವನ್ನು ತಕ್ಷಣವೇ ಜಾರಿಗೊಳಿಸಲಾಗುವುದು” ಎಂದು ಬೆಂಗಳೂರಿನ ಎನ್‌ಎಚ್‌ಎಐ ಪ್ರಾದೇಶಿಕ ಅಧಿಕಾರಿ ವಿವೇಕ್ ಜೈಸ್ವಾಲ್ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X