ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

Date:

Advertisements

ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ಸುಳ್ಳು. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಹೀಗೆ ಅವರ ಬಗ್ಗೆ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರ್‌ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.

ತುಮಕೂರಿನಲ್ಲಿ ಶನಿವಾರ ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು. ಜಾತಿಗೆ ಚಲನೆ ಇಲ್ಲ, ವರ್ಗಕ್ಕೂ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಇದಕ್ಕೆಲ್ಲ ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ” ಎಂದು ಅಭಿಪ್ರಾಯಪಟ್ಟರು.

Advertisements

“ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ. ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು.

“ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು. ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ” ಎಂದು ಹೇಳಿದರು.

ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ? ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ” ಎಂದರು.

ಅಹಿಂದ ಸಮಾಜ ಮತ್ತು ಎಲ್ಲ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ. ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು. ಎಲ್ಲ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಗೇಕು” ಎಂದು ಕರೆ ನೀಡಿದರು.

“ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗಧಿಯಾಗಿತ್ತು. ಆದರೆ ಈಗ ಶಿಕ್ಷಣ ಸಿಕ್ಕಿದೆ. ನಿಮ್ಮ ನಿಮ್ಮ‌ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ” ಎಂದರು.

“ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು.
ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X