ಬೆಂಗಳೂರಿನಲ್ಲಿ ನಡೆಯಲಿದೆ ವಿಪಕ್ಷಗಳ ಮಹಾ ಸಭೆ

Date:

Advertisements

ವಿರೋಧ ಪಕ್ಷಗಳ ನಾಯಕರ ಮುಂದಿನ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಜುಲೈ 13 ಅಥವಾ 14ರಂದು ನಿಗದಿಯಾಗುವ ಸಾಧ್ಯತೆಯಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಘೋಷಿಸಿದ್ದಾರೆ. ಬಿಹಾರ ಮತ್ತು ಕರ್ನಾಟಕದಲ್ಲಿ ವಿಧಾನಸಭೆ ಅಧಿವೇಶನಗಳು ನಡೆಯುತ್ತಿರುವದರಿಂದ ಇತರ ಪಕ್ಷಗಳೊಂದಿಗೆ ಸಮಾಲೋಚಿಸಿ ಈ ಎರಡು ದಿನಗಳಲ್ಲಿ ಒಂದು ದಿನವನ್ನು ನಿಗದಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತದರ ಎನ್‌ಡಿಎ ಒಕ್ಕೂಟವನ್ನು ಅಣಿಯಲು ವಿಪಕ್ಷಗಳು ಕಸರತ್ತು ನಡೆಸುತ್ತಿವೆ. ಹಲವು ಸಭೆಗಳನ್ನು ನಡೆಸುತ್ತಿವೆ. ಇತ್ತೀಚೆಗೆ ಬಿಹಾರದ ಪಾಟ್ನಾದಲ್ಲಿ ಸಭೆ ನಡೆದಿತ್ತು. ಈಗ ಎರಡನೇ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ.

ಈ ಮೊದಲು ಶಿಮ್ಲಾದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಬೆಂಗಳೂರಿನಲ್ಲಿ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ.

Advertisements

ಇತ್ತೀಚೆಗೆ ದೆಹಲಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಭೆ ನಡೆಯುವ ಕುರಿತು ಪಕ್ಷದ ನಾಯರೊಂದಿಗೆ ಚರ್ಚಿಸಿದ್ದಾರೆ. ಪಕ್ಷದ ರಾಜ್ಯ ಘಟಕ ಸದೃಢವಾಗಿದ್ದು, ಇಂತಹ ಮಹತ್ವದ ಸಭೆ ನಡೆಸಲು ಸಜ್ಜಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

“ವಿಪಕ್ಷಗಳ ಎರಡನೇ ಸಭೆ ನಡೆಸಲು ಬೆಂಗಳೂರು ಸೂಕ್ತ ಸ್ಥಳವಾಗಿದೆ. ಇಲ್ಲಿ ಬಿಜೆಪಿಯ ಭ್ರಷ್ಟಾಚಾರ ಬಯಲಾಗಿದೆ. ಬೆಂಗಳೂರಿನಲ್ಲಿ ನಡೆದ ಸಭೆಯು ಇಡೀ ಪ್ರತಿಪಕ್ಷಗಳಿಗೆ ಶಕ್ತಿ ತುಂಬುತ್ತದೆ. ಕರ್ನಾಟಕದಲ್ಲಿ ಬಿಜೆಪಿಯ ಸೋಲು ರಾಷ್ಟ್ರಮಟ್ಟದಲ್ಲಿ ಬಿಜೆಪಿ ಅಣಿಯಲು ಸ್ಥೈರ್ಯ ತುಂಬುತ್ತದೆ” ಎಂದು ಸಮಾಜವಾದಿ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ.

16 ರಾಜಕೀಯ ಪಕ್ಷಗಳ ನಾಯಕರು ಸುಮಾರು ಒಂದು ವಾರದ ಹಿಂದೆ ಪಾಟ್ನಾದಲ್ಲಿ ಸಭೆ ನಡೆಸಿದ್ದರು. 2018ರಲ್ಲಿ ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ವಿರೋಧ ಪಕ್ಷದ ನಾಯಕರಿಗೆ ಆತಿಥ್ಯ ನೀಡಿದ್ದರು. ಆದರೆ, ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ನಾಯಕರು ಭಾಗಿಯಾಗಿರಲಿಲ್ಲ. ಬೆಂಗಳೂರಿನಲ್ಲಿ ನಡೆಯುವ ಸಭೆಗೂ ಜೆಡಿಎಸ್‌ ಗೈರಾಗಬಹುದು ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ: ರೇಣುಕಾಚಾರ್ಯ, ಯತ್ನಾಳ್‌ಗೆ ಬಿಜೆಪಿ ನೋಟಿಸ್‌

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ಬಿಹಾರ ಡಿಸಿಎಂ ತೇಜಸ್ವಿ ಯಾದವ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಎಸ್ ಸೊರೆನ್, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಸೇರಿದಂತೆ ಹಲವು ವಿರೋಧ ಪಕ್ಷಗಳ ರಾಷ್ಟ್ರೀಯ ನಾಯಕರು ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬೆಂಗಳೂರಿಗೆ ಬಂದಿದ್ದರು. ಇದೀಗ, ವಿಪಕ್ಷಗಳ ಸಭೆಗಾಗಿ ಮತ್ತೆ ಬೆಂಗಳೂರಿಗೆ ಬರಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X