ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗಳು ಅಪಘಾತಕ್ಕೀಡಾಗಿದ್ದಾರೆ. ದಂಪತಿಗಳಲ್ಲಿ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತಿ ಪರಿಸ್ಥಿತಿ ಗಂಭೀರವಾಗಿದೆ.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದುಳಖೇಡ ಸಮೀಪ ರಾಷ್ಟ್ರೀಯ ಹೆದ್ದಾರಿ 52ರ ಭೀಮಾನದಿ ಬಿಡ್ಜ್ ಮೇಲೆ ಘಟನೆ ನಡೆದಿದೆ. ಮಹಾರಾಷ್ಟ್ರದ ದಕ್ಷಿಣ ಸೋಲಾಪುರ ತಾಲೂಕಿನ ಭಂಡರಕವಠೆ ಗ್ರಾಮದ ಗುಮತಾಪುರೆ (45) ಮೃತ ದುರ್ದೈವಿ. ಆಕೆಯ ಪತಿ ಕಾಂತಿಲಾಲ್ ಗುಮತಾಪುರೆ (50) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಹಲಸಂಗಿಯಲ್ಲಿ ಗುರುವಾರ ಸಂತೆ ಮುಗಿಸಿಕೊಂಡು ಬೈಕ್‌ನಲ್ಲಿ ದಂಪತಿಗಳು ತಮ್ಮೂರಿಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ, ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಝಳಕಿ ಪೋಲಿಸ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.