ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎತ್ತಿನಗುಡ್ಡ ಕಡೆಗೆ ಹೋಗುವ ರಸ್ತೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
ಲುಕಮನ್ ಬಾಗಲಕೋಟಿ (21), ತಬ್ರೆಜ್ ಪಾಡ ಅತ್ತಾರ (22), ಮಹಮ್ಮದ ಜುನೈದ್ ಅಂಗಡಿ (21) ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರೆಂದು ಗುರುತಿಸಿದ್ದಾರೆ.
ಬಂಧಿತರಿಂದ ಒಟ್ಟು 515ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಎಂಟಾರ್ಕ್ ಬೈಕ್ ವಶಪಡಿಸಿಕೊಂಡಿದ್ದಾರೆ.