ತುಮಕೂರು | ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ : ಜಿಲ್ಲಾಧಿಕಾರಿಗಳಿಂದ ಚಾಲನೆ

Date:

Advertisements

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ ಶನಿವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ ನೀಡಿದರು.  

 ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಏಪ್ರಿಲ್ 29 ಹಾಗೂ 30ರಂದು ಆಯೋಜಿಸಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಈ ರಥಯಾತ್ರೆಯನ್ನು ಆಯೋಜಿಸಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್ 17ರಂದು ರಥಯಾತ್ರೆಗೆ ಚಾಲನೆ ನೀಡಿದ್ದು, ರಥಯಾತ್ರೆಯು ನಾಡಿನಾದ್ಯಂತ ಸಂಚರಿಸಿ ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸಲಿದೆ ಎಂದು ತಿಳಿಸಿದರು.

 ಇಂದು ಪ್ರಜಾಪ್ರಭುತ್ವದಲ್ಲಿ ಸಮಾನತೆ, ಸ್ವಾತಂತ್ರ್ಯದ  ಬಗ್ಗೆ ನಾವೆಲ್ಲಾ ಮಾತನಾಡುತ್ತಿದ್ದೇವೆ. ಆದರೆ ಬಸವಣ್ಣನವರು 12ನೇ ಶತಮಾನದಲ್ಲಿಯೇ ತಮ್ಮ ಅನುಭವ ಮಂಟಪದ ಮೂಲಕ ಮಹಿಳೆಯರು ಸೇರಿದಂತೆ ಎಲ್ಲಾ ಕಾಯಕ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಏಳಿಗೆಗಾಗಿ ಹಗಲಿರುಳು ಶ್ರಮಿಸಿದರು. ಸಾಮಾಜಿಕ ತಾರತಮ್ಯ, ಲಿಂಗತಾರತಮ್ಯ, ಮೂಢ ನಂಬಿಕೆಗಳನ್ನು ಹೋಗಲಾಡಿಸಲು 800 ವರ್ಷಗಳ ಹಿಂದೆಯೇ ರಚಿಸಿದ ವಚನಗಳು ಇಂದಿಗೂ ಪ್ರಸ್ತುತವಾಗಿವೆ. ಬಸವಣ್ಣನವರ ಮಹತ್ವವನ್ನು ನಾಡಿಗೆ ಸಾರಲು ಹೊರಟಿರುವುದು ಶ್ಲಾಘನೀಯ. ನಮ್ಮ ಜಿಲ್ಲೆಯಲ್ಲಿಯೂ ಬಸವಣ್ಣನವರ ವಚನಗಳ ಕುರಿತು ವಿಚಾರ ಸಂಕಿರಣಗಳನ್ನು ಏರ್ಪಡಿಸಲು ಜಿಲ್ಲಾಡಳಿತದಿಂದ ತಯಾರಿ ನಡೆಸಲಾಗುವುದು ಎಂದು ತಿಳಿಸಿದರು. 

Advertisements

 ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ, ಬಸವಣ್ಣನವರ ಜಯಂತಿ ಅಂಗವಾಗಿ ಅವರ ಬದುಕು, ತತ್ವಗಳನ್ನು ಜನತೆಗೆ ತಿಳಿಸಲು ಸರಕಾರ ಕೈಗೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಇಂದು ತುಮಕೂರಿಗೆ ಆಗಮಿಸಿದೆ. ಬಸವಣ್ಣನವರ ವಚನಗಳ ಸಾರವನ್ನು ತಿಳಿದು ನಡೆದರೆ, ಕಲ್ಯಾಣ ರಾಜ್ಯ ಸಾಕಾರಗೊಳ್ಳಲಿದೆ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಬಸವಾದಿ ಶರಣರ ಸಂದೇಶಗಳನ್ನು ಸರಕಾರ ನಾಡಿಗೆ ಪಸರಿಸಲು ಹೊರಟಿರುವುದು ಸ್ವಾಗತಾರ್ಹ. ಇದರ ಜೊತೆಗೆ ಶಾಲಾ, ಕಾಲೇಜುಗಳಲ್ಲಿ ಬಸವಣ್ಣನವರ ಬಗ್ಗೆ ವಿಚಾರ ಸಂಕಿರಣ, ಕಾರ್ಯಾಗಾರಗಳನ್ನು ನಡೆಸುವುದರ ಜೊತೆಗೆ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಸವಭವನ ನಿರ್ಮಾಣ ಮಾಡಬೇಕೆಂಬುದು ಬಹು ಜನರ ಬೇಡಿಕೆಯಾಗಿದೆ. ಸರಕಾರ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂಬುದು ಶರಣರ ಒತ್ತಾಯವಾಗಿದೆ ಎಂದರು. 

 ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಡಾ: ಪರಮೇಶ್, ತುಮಕೂರು ನಗರ ವೀರಶೈವ ಸೇವಾ ಸಮಾಜದ ಅಧ್ಯಕ್ಷ ಜಿ.ಎಸ್.ಚಂದ್ರಮೌಳಿ, ಮುಖಂಡರಾದ ಸದಾಶಿವಯ್ಯ, ಎಂ.ಜಿ. ಸಿದ್ದರಾಮಯ್ಯ, ಡಾ. ಡಿ.ಎನ್.ಯೋಗೀಶ್ವರಪ್ಪ, ಎಸ್. ಕುಮಾರಸ್ವಾಮಿ, ರಾಜಶೇಖರಯ್ಯ, ಶಶಿಧರನ್, ತಕರಾರಿ ಮಹೇಶ್, ಕನ್ನಡ ಪ್ರಕಾಶ, ಶ್ರೀಧರ, ಅನುಸೂಯಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X