ಆಟೊ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುಂಡರಗಿ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಆಟೊ ರಿಕ್ಷಾ ಸವಾರ ಬಸವರಾಜ (55) ಮತ್ತು ಬೈಕ್ ಸವಾಋ ಅಂಜನಪ್ಪ (45) ಮೃತರು ಎಂದು ಗುರುತಿಸಲಾಗಿದೆ.
ಯಾದಗಿರಿಯಿಂದ ಮುಂಡರಗಿ ಕಡೆ ಚಲಿಸುತ್ತಿದ್ದ ಆಟೊ ಯಾದಗಿರಿ ಕಡೆಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಯಾದಗಿರಿ ಸಂಚಾರ ಪಿಎಸ್‌ಐ ವಿರೇಶ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಅಂಬೇಡ್ಕರ್ ಜಯಂತಿ ಅಂಗವಾಗಿ ಮಕ್ಕಳಿಗೆ ಸೈಕಲ್ ವಿತರಣೆ