ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಅದೂ ಪ್ರಮುಖವಾಗಿ ಕರಾವಳಿ ಕರ್ನಾಟಕದಲ್ಲಿ ಮುಂದಿನ 5 ದಿನಗಳವರೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
