ವಕ್ಫ್ ಮಸೂದೆಗೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ; ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಸಜ್ಜು

Date:

Advertisements

ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾಗಿರುವುದನ್ನು ವೆಲ್ಫೇರ್ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂವಿಧಾನಬಾಹಿರ ತಿದ್ದುಪಡಿಯ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೇಂದ್ರ ಸಮಿತಿಯು ದೇಶವ್ಯಾಪಿ ಹೋರಾಟಕ್ಕೆ ಕರೆ ನೀಡಿದ್ದು, ಇದರ ಅಂಗವಾಗಿ ರಾಜ್ಯದ್ಲಲಿ ವಕ್ಫ್ ಸಂರಕ್ಷಣೆ -ನಮ್ಮ ಹೊಣೆ ಎಂಬ ಶೀರ್ಷಿಕೆ ಅಡಿಯಲ್ಲಿ ಏಪ್ರಿಲ್ 20ರಿಂದ ಏಪ್ರಿಲ್ 27ರವರೆಗೆ ರಾಜ್ಯವ್ಯಾಪಿ ಚಳುವಳಿ ಹಮ್ಮಿಕೊಂಡಿದೆ.

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ | ಮುರ್ಶಿದಾಬಾದ್‌ ಕೋಮುಗಲಭೆ: ಊರು ಬಿಡುವುದೊಂದೇ ಜನರಿಗೆ ಕಂಡ ದಾರಿ

Advertisements

ಈ ಚಳುವಳಿಯ ಭಾಗವಾಗಿ ರಾಜ್ಯಾದ್ಯಂತ ಪತ್ರಿಕಾಗೋಷ್ಠಿ, ಬಿತ್ತಿ ಪತ್ರ , ವಿಚಾರಗೋಷ್ಠಿಗಳು, ಪ್ರತಿಭಟನೆ, ಧರಣಿ ಸತ್ಯಾಗ್ರಹ, ಪಾದಯಾತ್ರೆ, ಸಹಿ ಸಂಗ್ರಹಣೆ, ಕರಪತ್ರ ಹಂಚಿಕೆ, ಹೀಗೆ ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದೆ.

“ವಕ್ಫ್ ತಿದ್ದುಪಡಿ ಕಾಯ್ದೆಯು ಸಂವಿಧಾನಿಕ ಚೌಕಟ್ಟಿನ ವಿರುದ್ಧವಾಗಿದೆ. ವಿಧಿ 14ರ ಪ್ರಕಾರ ಇದು ತಾರತಮ್ಯವೆಂದು ಪರಿಗಣಿಸಲಾಗುವುದು. ಏಕೆಂದರೆ ಇದು ಮುಸ್ಲಿಂ ದತ್ತಿಗಳಿಗೆ ಮಾತ್ರ ಅಸಮಾನವಾಗಿ ಪರಿಣಾಮ ಬಿರುತ್ತದೆ. ಅದೇರೀತಿ ವಿಧಿ 25 ಮತ್ತು 28ರ ಪ್ರಕಾರ ಈ ಕಾಯ್ದೆಯು ಮುಸ್ಲಿಂ ನಾಗರಿಕರ ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಹಕ್ಕು ಮತ್ತು ಸ್ವಾತಂತ್ರವನ್ನು ಉಲಂಘಿಸುತ್ತದೆ. ವಿಧಿ 30ರ ಪ್ರಕಾರ ಮುಸ್ಲಿಂ ನಾಗರಿಕರಿಗೆ ತಮ್ಮ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆಮಾಡುವ ಮತ್ತು ನಿರ್ವಹಣೆ ಮಾಡುವ ಹಕ್ಕಿನಲ್ಲು ಕೂಡ ಹಸ್ತಕ್ಷೇಪ ಮಾಡುತ್ತದೆ. ಈ ಕಾಯ್ದೆ ವಕ್ಫ್ ಆಸ್ತಿಗಳ ಮೂಲ ಉದ್ದೇಶವನ್ನು ಬದಲಾಯಿಸಲು ಅವಕಾಶ ನೀಡುತ್ತದೆ, ಇದು ವಕ್ಫ್ ಆಸ್ತಿಯ ಶಾಶ್ವತ ಸಮರ್ಪಣೆಯ ಇಸ್ಲಾಮಿ ತತ್ವಕ್ಕೆ ವಿರುದ್ಧವಾಗಿದೆ” ಎಂದು ವೆಲ್ಫೇರ್ ಪಾರ್ಟಿ ಪತ್ರಿಕಾಗೋಷ್ಠಿಯಲ್ಲಿ ಮುಖಂಡ ತಾಹೇರ್ ಹುಸೇನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ದಾವಣಗೆರೆ | ವಕ್ಫ್ ತಿದ್ದುಪಡಿ ವಿರುದ್ಧ ಪ್ರಚೋದನಕಾರಿ ಹೇಳಿಕೆ, ಪಾಲಿಕೆ ಮಾಜಿ ಸದಸ್ಯ ಕಬೀರ್ ಬಂಧನ.

“ವಕ್ಫ್ ತಿದ್ದುಪಡಿ ಕಾಯ್ದೆಯ ಮೂಲ ಉದ್ದೇಶ ವಕ್ಫ್ ಆಸ್ತಿಗಳ ಮೇಲೆ ಸರಕಾರದ ನಿಯಂತ್ರಣ ಹೆಚ್ಚಿಸುವುದು ಮತ್ತು ವಕ್ಫ್ ಸಂಸ್ಥೆಯ ಸ್ವಾಯತ್ತತ್ತೆಯನ್ನು ದುರ್ಬಲಗೊಳಿಸುತ್ತದೆ. ವಕ್ಫ್ ಕಾಯ್ದೆ 1995 ರ ಸೆಕ್ಷನ್ 3(ಆರ್) ರಲ್ಲಿ 5 ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಆಚರಿಸುವ ಸ್ಥಿತಿಯನ್ನು ಸೇರಿಸುವುದು, ವಕ್ಫ್ ರಚಿಸಲು ಅರ್ಹತಾ ಮಾನದಂಡವಾಗಿ 5 ವರ್ಷಗಳ ಪೂರ್ವಾಪೇಕ್ಷಿತ ಷರತ್ತು ವಿಚಿತ್ರ ಮತ್ತು ಅಸಂಬದ್ಧವಾಗಿದೆ. ಈ ತಿದ್ದುಪಡಿಯ ಮೂಲಕ ಅವನು/ ಅವಳು ಮುಸ್ಲಿಂ ಎಂದು ನಿರ್ಧರಿಸುವ ಅಧಿಕಾರ ಯಾರಿಗೆ ಇರುತ್ತದೆ ಎಂಬ ಬಗ್ಗೆ ಅನುಮಾನವಿದೆ ಎಂದು ತಿಳಿಸಿದೆ.

ವಕ್ಫ್ ಕಾಯ್ದೆ 2025ರ ಈ ನಿಬಂಧನೆಯು ಸಂವಿಧಾನಬಾಹಿರ ಮತ್ತು ಸಂಸತ್ತಿನ ಸಾಮರ್ಥ್ಯವನ್ನು ಮೀರಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಈ ಕಾಯ್ದೆಯನ್ನು ಒಪ್ಪಲಾಗದು ಸರಕಾರ ಈ ಕಾಯ್ದೆ ವಾಪಸ್ ಪಡೆಯವವರೆಗೂ ಹೋರಾಟ ನಡೆಸಲಾಗುವುದು, ಇದು ಕೇವಲ ಒಂದು ಸಮುದಾಯದ ವಿಷವಲ್ಲದೆ ಸಂವಿಧಾನ ವಿರೋಧಿ ನಡೆಯಾಗಿದ್ದು ರಾಜ್ಯದ ಎಲ್ಲಾ ನಾಗರಿಕರು ಈ ಹೋರಾಟಕ್ಕೆ ಬೆಂಬಲಿಸಬೇಕೆಂದು ವೆಲ್ಫೇರ್ ಪಾರ್ಟಿ ಒತ್ತಾಯಿಸಿದೆ.

ಕೇಂದ್ರ ಸರ್ಕಾರದ ನಡೆ ದ್ವೇಷದಿಂದ ಕೂಡಿದೆ. ಇಂತಹ ಸೂಕ್ಷ್ಮ ವಿಷಯದಲ್ಲಿ ದ್ವೇಷ ಸಾಧಿಸುವಂಥದ್ದು ಸರಿಯಲ್ಲ. ಕೇಂದ್ರವು ಸಂಯಮದಿಂದ ನಡೆದುಕೊಳ್ಳಬೇಕಿತ್ತು. ಹಿಂದೂ ಧರ್ಮದ ಟ್ರಸ್ಟ್‌ಗಳು, ವಕ್ಫ್ ಮಂಡಳಿ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿದೆ. ಭೂಮಿ ಮೇಲೆ ಹಕ್ಕು ಇರುವುದು ರಾಜ್ಯಕ್ಕೆ. ರಾಜ್ಯದ ಹಕ್ಕನ್ನು ಕಿತ್ತುಕೊಳ್ಳುವ ಯತ್ನವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್, ರಾಜ್ಯ ಉಪಾಧ್ಯಕ್ಷ ಇಂಜಿನಿಯರ್ ಹಬಿಬುಲ್ಲಾಹ್ ಖಾನ್ ಹಾಗೂ ಮಾಧ್ಯಮ ಸಂಚಾಲಕ ರಿಜ್ವಾನ್ ಹುಮನಾಬಾದ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X