ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯ ಶಕ್ತಿನಗರದಲ್ಲಿ ಇಂದು(ಏಪ್ರಿಲ್ 20) ನಡೆಯಲಿರುವ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಎಂಬ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಸಂಬಂಧಿಸಿದ್ದಂತೆ ಹಾಕಲಾಗಿದ್ದ ಹಲವು ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದಿದ್ದಾರೆ.
ಶನಿವಾರ ರಾತ್ರಿ ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರುಗಳ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಹರಿಯಲಾಗಿದೆ.
ಇದನ್ನು ಓದಿದ್ದೀರಾ? ಮೈಸೂರು | ವಾಜಮಂಗಲದಲ್ಲಿ ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿ ವಿಕೃತಿ ಮೆರೆದ ಕಿಡಿಗೇಡಿಗಳು

ಈ ಘಟನೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಖಂಡಿಸಿದ್ದಾರೆ. “ಕಾಂಗ್ರೆಸ್‌ನ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕಾರ್ಯಕರ್ತರು ಹತಾಶೆಯಿಂದ ಈ ವಿಕೃತ ಕಾರ್ಯ ನಡೆಸಿದ್ದಾರೆ. ಇಂತಹ ಕಾರ್ಯದಿಂದ ಕಾಂಗ್ರೆಸ್ ಕಾರ್ಯಕರ್ತರು ಅಥವಾ ನಮ್ಮ ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ. ನೀವು ಚಿವುಟಿದಷ್ಟು ನಾವು ಚಿಗುರುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಇಂದಿನ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಚೆಲುವರಾಯ ಸ್ವಾಮಿ, ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಹತ್ತಾರು ದಿನಗಳಿಂದ ಬೆಳ್ತಂಗಡಿ ತಾಲೂಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್, ಕಾಂಗ್ರೆಸ್ ಧ್ವಜಗಳು ಸೇರಿದಂತೆ ಬಂಟಿಂಕ್ಸ್‌ಗಳನ್ನು ಅಳವಡಿಸಲಾಗಿತ್ತು. ಕಳೆದ ರಾತ್ರಿ ಗುರುವಾಯನಕೆರೆ ಎಂಬಲ್ಲಿ ಅಳವಡಿಸಲಾಗಿದ್ದ ಹತ್ತಾರು ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
