ಕೊಪ್ಪಳ ಜಿಲ್ಲಾಧಿಕಾರಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದು, ನ್ಯಾಯಾಲಯದ ಆದೇಶದಂತೆ ಕಾರ್ ಜಪ್ತಿ ಮಾಡಲು ಸಿಬ್ಬಂದಿ ಬಂದಾಗ ಅವಕಾಶ ಕೊಡದ ಡಿಸಿ ನಳೀನ್ ಅತುಲ್ ಮತ್ತೆ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ.
ಗಂಗಾವತಿಯ ರಸ್ತೆ ಅಗಲಿಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದರ ವಿಚಾರಣೆ ನಡೆಸಿದ್ದ ನಗರ ನ್ಯಾಯಾಲಯ, ಜಿಲ್ಲಾಧಿಕಾರಿ ಕಾರನ್ನು ಜಪ್ತಿ ಮಾಡಲು ಆದೇಶಿಸಿತ್ತು. ಕಾರು ಜಪ್ತಿ ಮಾಡಲು ಕೋರ್ಟ್ ಅಧಿಕಾರಿಗಳು ಹೋದಾಗ ಕಾರಿನ ಕೀ ಕೊಡದೇ ಸತಾಯಿಸಿದ್ದಾರೆ.
ಗಂಗಾವತಿ ನಗರಸಭೆ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಈ ವೇಳೆ ಗಂಗಾವತಿಯ ಕಲ್ಮಠ ಹಾಗೂ ವೀರುಪಾಕ್ಷಪ್ಪ ಅವರ ಭೂಮಿ ಒತ್ತುವರಿ ಮಾಡಿ ರಸ್ತೆ ಅಗಲೀಕರಣ ಮಾಡಲಾಗಿದೆ. ಮಾಲೀಕರಿಗೆ ಮಾಹಿತಿ ನೀಡದೆ ರಸ್ತೆ ಅಗಲೀಕರಣ ಮಾಡಿದ್ದು, ಜಮೀನು ಮಾಲೀಕರಿಗೆ ಪರಿಹಾರ ಕೊಡದ ಹಿನ್ನೆಲೆ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಏ.30ರಂದು ಬಸವ ಜಯಂತಿ : ವಚನಗಳ ಕಿರುಪುಸ್ತಕ ಹಂಚಲು ನಿರ್ಧಾರ
ಸುದೀರ್ಘ 6 ವರ್ಷಗಳ ಕಾಲ ವಿಚಾರಣೆ ನಡೆಸಿದ್ದ ಕೋರ್ಟ್ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡಲು ಆದೇಶ ಮಾಡಿತ್ತು. ವಿಚಾರಣೆ ಮಾಡಿದ ಬಳಿಕ ಕಲ್ಮಠಕ್ಕೆ ಸುಮಾರು ₹7 ಲಕ್ಷ, ವಿರೂಪಾಕ್ಷಪ್ಪ ಅವರಿಗೆ ₹6 ಲಕ್ಷ ಪರಿಹಾರ ನೀಡಲು ಆದೇಶ ಮಾಡಿತ್ತು. ಈವರೆಗೂ ಪರಿಹಾರ ಸಿಕ್ಕಿರಲಿಲ್ಲ. ಹೀಗಾಗಿ ಮಾಲೀಕರು ಮತ್ತೊಮ್ಮೆ ಕೋರ್ಟ್ ಮೊರೆ ಹೋದಾಗ ಗಂಗಾವತಿಯ ಹಿರಿಯ ಶ್ರೇಣಿಯ ನ್ಯಾಯಾಲಯ ಕಾರು ಜಪ್ತಿ ಮಾಡಲು ಆದೇಶ ನೀಡಿತ್ತು.