ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ಜಿಲ್ಲೆ. ಈ ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷೆ ಸಂರಕ್ಷಣಾ ಸಹಾಯಕ ವಿಜಯ್ ಕುಮಾರ್ ಹೇಳಿದರು.
ಬಿಎಲ್ ಈ ಸಂಸ್ಥೆಯ ಎಸ್ ಬಿ ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ಸಹಯೋಗದಲ್ಲಿ ಕಲಾ ಹಾಗೂ ವಿಜ್ಞಾನ ವಿಭಾಗದ ಎನ್ಎಸ್ಎಸ್ ವಿದ್ಯಾರ್ಥಿಗಳೊಂದಿಗೆ ವಿಜಯಪುರ ನಗರದ ತರವಿ ದೇವಸ್ಥಾನದಿಂದ ಸಂಗೀತ್ ಮಹಲ್‌ವರೆಗೆ ಪಾರಂಪರಿಕ ನಡಿಗೆ ಸ್ಮಾರಕಗಳ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
“ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಐತಿಹಾಸಿಕ ಸ್ಥಳಗಳಿಗೆ ಪ್ರಸಿದ್ಧ ತಾಣ. ವಿಜಯಪುರ ಜಿಲ್ಲೆಯಲ್ಲಿ ಅತಿಹೆಚ್ಚು ಸ್ಮಾರಕಗಳು ಐತಿಹಾಸಿಕ ಸ್ಥಳಗಳು ಇವೆ. ಈ ಎಲ್ಲ ಐತಿಹಾಸಿಕ ಸ್ಥಳಗಳ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಪ್ರತಿಕಲ್ಲು ಒಂದೊಂದು ಕಥೆ ಹೇಳುತ್ತದೆ” ಎಂದು ವಿಜಯ್ ಕುಮಾರ್ ಅವರು ಹೇಳಿದರು.

ಪುರಾತತ್ವ ಇಲಾಖೆ ವಾಸ್ತು ಸಂಗ್ರಹಾಲಯಗಳ ನಿರ್ದೇಶಕಿ ಸ್ಮಿತಾ ರೆಡ್ಡಿ ಅವರು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಐತಿಹಾಸಿಕ ಸ್ಮಾರಕಗಳ ರಕ್ಷಣೆಯ ಮಹತ್ವವನ್ನು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಯುವಪತ್ರಕರ್ತ ಸಂದೀಪ್ ಪೂಜಾರಿ ನಿಧನ
ಈ ಪಾರಂಪರಿಕ ನಡಿಗೆಯಲ್ಲಿ ವಿದ್ಯಾರ್ಥಿಗಳು “ಐತಿಹಾಸಿಕ ಸ್ಮಾರಕ ಉಳಿಸಿ ಸಂಸ್ಕೃತಿ ಬೆಳೆಸಿ” “ಪ್ರತಿ ಕಲ್ಲು ಒಂದೊಂದು ಕಥೆ ಹೇಳುತ್ತವೆ” ಎಂದು ಸ್ಲೋಗನ್‌ಗಳನ್ನು ಹೇಳಿದರು.
ಜಿಲ್ಲಾ ಪ್ರವಾಸೋದ್ಯಮ ಸಲಹೆಗಾರ ಅನಿಲ್ ಬಣಜಿಗೆ, ಮತ್ತು ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಆರ್ ಎಂ ಮಿರ್ದೆ, ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಮುಖ್ಯಸ್ಥರಾದ ಡಾ. ತರುಣಮ್ ಜಬೀನ್ ಖಾನ್, ಮಿಲನ್ ರಾಠೋಡ್ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳು ಇದ್ದರು.